ಎಂ.ಬಿ.ಎಚ್. ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆ.

1751698572173
Published on
ಗದಗ: ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ  ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಶ್ರೀಮತಿ ಎಂ. ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದಲ್ಲಿ ಯೋಗ ದಿನಾಚರಣೆಯನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿಕೊಂಡಿದ್ದ ವಿದ್ಯಾದಾನ ಸಮಿತಿಯ ಕ್ರಿಯಾಶೀಲ ಕಾರ್ಯದರ್ಶಿಗಳಾದ ಶ್ರೀ ಶ್ರೀನಿವಾಸ ಹುಯಿಲಗೋಳ ಅವರು ಕಾರ್ಯಕ್ರಮಕ್ಕೆ ಆಗಮಿಸಿದ್ದ ಅತಿಥಿ ಮಹೋದಯರನ್ನು ಸ್ವಾಗತಿಸಿಕೊಂಡು ನಂತರ ಮಾತನಾಡಿದ ಅವರು  ಯೋಗದ ಹಿನ್ನಲೆ, ಅದರ ಉಪಯೋಗಗಳ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ನೀಡಿದರು.
ಈ ಕಾರ್ಯಕ್ರಮಕ್ಕೆ ಅತಿಥಿಗಳಾಗಿ ಆಗಮಿಸಿದ್ದ ಯೋಗ ತರಬೇತುದಾರರಾದ ಡಾ. ಸತೀಶ ಹೊಂಬಾಳೆ ಅವರು ಮಾತನಾಡಿ ಯೋಗವು ಸದೃಢ ಜೀವನಕ್ಕಾಗಿ ತುಂಬಾ ಅಗತ್ಯವಾದುದು, ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ತುಂಬಾ ಉಪಯುಕ್ತಕಾರಿ, ಎಲ್ಲರೂ ಯೋಗ ಅಭ್ಯಾಸವನ್ನು ತಮ್ಮ ದಿನನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು. ಮತ್ತು ಈ ವರ್ಷದ ಯೋಗ ದಿನದ ವಾಕ್ಯವಾದ "ಒಂದು ಭೂಮಿ, ಒಂದು ಆರೋಗ್ಯ" ದ ಕುರಿತು ಪ್ರಶಿಕ್ಷಣಾರ್ಥಿಗಳಿಗೆ ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಲ್ಲರಿಗೂ ಯೋಗದ ಕೆಲವು ಆಸನಗಳು, ಪ್ರಾಣಾಯಾಮ ಮತ್ತು ಧ್ಯಾನವನ್ನು ಮಾಡಿಸಿದರು.
ಈ ಕಾರ್ಯಕ್ರಮವನ್ನು ಉದ್ದೇಶಿಸಿ  ಮಹಾವಿದ್ಯಾಲಯದ ಪ್ರಾಚಾರ್ಯರಾದ ಡಾ. ಗಂಗೂಬಾಯಿ ಪವಾರ ಅವರು ಮಾತನಾಡಿ ಯೋಗವು ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕಾಗಿ ಎಲ್ಲರಿಗೂ ತುಂಬಾ ಅಗತ್ಯವಾದುದು ಎಲ್ಲರೂ ಯೋಗ ಅಭ್ಯಾಸವನ್ನು ತಮ್ಮ ದಿನ ನಿತ್ಯದ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದು ತಿಳಿಸಿದರು ಹಾಗೂ  ಯೋಗಾಸನ ಮತ್ತು ಪ್ರಾಣಾಯಾಮ ಮಾಡುವುದರಿಂದ ತಮಗೆ ಆದ ಅನುಭವಗಳನ್ನು ಪ್ರಶಿಕ್ಷಣಾರ್ಥಿಗಳೊಂದಿಗೆ ಹಂಚಿಕೊಂಡರು.
 ಕಾರ್ಯಕ್ರಮದಲ್ಲಿ ವಿದ್ಯಾದಾನ ಸಮಿತಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ ಬಿ. ಎಸ್. ರಾಠೋಡ ಮತ್ತು ಜೆ. ಎನ್. ಕಲಾ ಮಹಾವಿದ್ಯಾಲಯದ ಉಪನ್ಯಾಸಕರು ಮತ್ತು ಯೋಗ ಗುರುಗಳಾದ ಶ್ರೀ ಪಿ. ಬಿ. ಬಂಡಿ ಮತ್ತು ಶ್ರೀಮತಿ ಎಂ. ಬಿ. ಹುಯಿಲಗೋಳ ಶಿಕ್ಷಣ ಮಹಾವಿದ್ಯಾಲಯದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು, ಎಲ್ಲ ಪ್ರಶಿಕ್ಷಣಾರ್ಥಿಗಳು ಹಾಗೂ ವಿದ್ಯಾದಾನ ಸಮಿತಿಯ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಎಲ್ಲ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net