

ಕಾರ್ಯಕ್ರಮದಲ್ಲಿ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಅಶೋಕ ಮಂದಾಲಿ, ಗದಗ ಹಾಗೂ ಗದಗ ತಾಲೂಕು ಮಟ್ಟದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಸದಸ್ಯರಾದ ಕೃಷ್ಣಗೌಡ ಎಚ್ ಪಾಟೀಲ, ಜೆ.ಪಿ, ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ, ಶ್ರೀಮತಿ, ವಿಜಯಲಕ್ಷೀ್ಮ ಹಿರೇಗೌಡರ, ಜಿಲ್ಲಾ ಉದ್ಯೋಗಾಧಿಕಾರಿಗಳಾದ ಬಸವಂತ್.ಪಿ.ಎನ್ ಮತ್ತು ಆಪ್ತ ಸಮಾಲೋಚಕರಾದ ಆನಂದ ಹೆÇಂಬಳ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು,
ಯುವ ನಿಧಿ ಯೋಜನೆಯು ಕರ್ನಾಟಕದ ನಿರುದ್ಯೋಗಿ ಪದವೀಧರರು ಮತ್ತು ಡಿಪ್ಲೊಮಾ ಹೊಂದಿರುವವರಿಗೆ ನಿರುದ್ಯೋಗ ಭತ್ಯೆ ಒದಗಿಸುತ್ತಿದ್ದು. ಪದವೀಧರರು ತಿಂಗಳಿಗೆ 3,000 ಮತ್ತು ಡಿಪ್ಲೊಮಾ ಹೊಂದಿರುವವರು 1,500 . ನಿರುದ್ಯೋಗ ಭತ್ಯೆಯನ್ನು ಕೊಡುತ್ತಿದ್ದು 2023ರಿಂದ ಪದವಿ ಅಥವಾ ಡಿಪ್ಲೊಮಾ ಪಡೆದಿರಬೇಕು ಮತ್ತು ಶಿಕ್ಷಣವನ್ನು ಪೂರ್ಣಗೊಳಿಸಿದ ನಂತರ ಕನಿಷ್ಠ ಆರು ತಿಂಗಳ ಕಾಲ ನಿರುದ್ಯೋಗಿಗಳಾಗಿರಬೇಕು. ನಿರುದ್ಯೋಗ ಭತ್ಯೆಯನ್ನು ಗರಿಷ್ಠ ಎರಡು ವರ್ಷಗಳವರೆಗೆ. ನೀಡಲಾಗುತ್ತದೆ. ಸೇವಾ ಸಿಂಧು ಪೋರ್ಟಲ್ ಮೂಲಕ ಆನ್ಲೆöÊನ್ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.