ಜಿಲ್ಲೆಯಾದ್ಯಂತ ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನ ಕಾರ್ಯಕ್ರಮ: ಭರತ್ ಎಸ್

19GDG02
Published on

ಗದಗ: ವಿಶ್ವ ಶೌಚಾಲಯ ಮತ್ತು ವಿಶ್ವ ಮಾನವ ಹಕ್ಕುಗಳ ದಿನಾಚರಣೆಗಳ ಪ್ರಯುಕ್ತ ಪ್ರಸ್ತುತ ವರ್ಷ ನಮ್ಮ ಶೌಚಾಲಯ ನಮ್ಮ ಗೌರವ" ಎಂಬ ಶೀರ್ಷಿಕೆ ಹಾಗೂ "ಅಂದದ ಶೌಚಾಲಯ ಆನಂದದ ಜೀವನ ಎಂಬ ಘೋಷ ವಾಕ್ಯದೊಂದಿಗೆ ನವೆಂಬರ್ 19 ರಿಂದ ಡಿಸೆಂಬರ್ 10 ರವರೆಗೆ ಜಿಲ್ಲೆಯಾದ್ಯಂತ ವಿಶೇಷ ಆ0ದೋಲನ ನಡೆಯಲಿದೆ.

ಗ್ರಾಮೀಣ ಸಮುದಾಯದಲ್ಲಿ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತು ಜಾಗೃತಿ ಮೂಡಿಸಿ ಶೌಚಾಲಯಗಳನ್ನು ನಿರಂತರವಾಗಿ ಬಳಸುವಂತೆ ಪ್ರೇರೇಪಿಸುವ ಉದ್ದೇಶದೊಂದಿಗೆ ಪ್ರತಿ ವರ್ಷ ನವೆಂಬರ್ 19 ರಂದು ವಿಶ್ವ ಶೌಚಾಲಯ ದಿನವನ್ನಾಗಿ ಆಚರಿಸಲಾಗುತ್ತಿದೆ. ಬಯಲು ಬಹಿರ್ದೇಸೆ ಮುಕ್ತ ಸ್ಥಿತಿಯ ಸ್ಥಾನ ಮಾನವನ್ನು ಉಳಿಸಿಕೊಳ್ಳುವಲ್ಲಿ ಈ ದಿನಾಚರಣೆ ಪ್ರಮುಖ ಪಾತ್ರ ವಹಿಸುತ್ತಿದೆ.

ಈ ವಿಶೇಷ ಆಂದೋಲನದ ಅವಧಿಯಲ್ಲಿ ಜಿಲ್ಲೆಯಲ್ಲಿ ಕಾರ್ಯತ್ಮಕವಲ್ಲದ / ನಿರುಪಯುಕ್ತ ಸಮುದಾಯ ಶೌಚಾಲಯಗಳನ್ನು ಗುರುತಿಸಲು ಸಮೀಕ್ಷೆ ನಡೆಸಲಾಗುವುದು. ಮತ್ತು ನೀರು ಮತ್ತು ನೈರ್ಮಲ್ಯ ವಿಷಯಗಳಿಗೆ ಸಂಬAಧಿಸಿದAತೆ ಜಿಲ್ಲೆಯಲ್ಲಿನ ಪ್ರಸ್ತುತ ಸ್ಥಿತಿಗತಿ ಮತ್ತು ತೆಗೆದುಕೊಳ್ಳಬೇಕಾದ ಪರಿಹಾರ/ಯೋಜನಾ ಕ್ರಮಗಳ ಬಗ್ಗೆ ಚರ್ಚಿಸಿ ನಿರ್ಣಯಗಳನ್ನು ಕೈಗೊಳ್ಳಲಾಗುವುದು.

ನಿರುಪಯುಕ್ತ ಸಮುದಾಯ ಶೌಚಾಲಯಗಳ ದುರಸ್ತಿ, ಮರು ಸ್ಥಾಪನೆ ಮತ್ತು ಪರಿಷ್ಕರಣೆಯ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು. ಇದರೊಂದಿಗೆ ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳನ್ನು ಸುಂದರೀಕರಣಗೊಳಿಸಲು ಸಮುದಾಯ ಮಟ್ಟದಲ್ಲಿ ಜಾಗೃತಿ ಮೂಡಿಸಿ, ಸಮುದಾಯವನ್ನು ಈ ಕಾರ್ಯದಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲಾಗುವುದು.

ಗ್ರಾಮೀಣ ಸಮುದಾಯದಲ್ಲಿ ಶೌಚಾಲಯಗಳ ಬಳಕೆಯನ್ನು ಉತ್ತೇಜನೆ,ವೈಯಕ್ತಿಕ ಗೃಹ ಶೌಚಾಲಯಗಳಿಗೆ ಮಂಜೂರಾತಿ ಪತ್ರಗಳನ್ನು ವಿತರಿಸಲಾಗುವುದು.

ವೈಯಕ್ತಿಕ ಗೃಹ ಶೌಚಾಲಯಗಳು ಮತ್ತು ಸಮುದಾಯ ಶೌಚಾಲಯಗಳ ಅಂತಿಮ ಸಮೀಕ್ಷೆ ಮಾಡಿ, ಶೌಚಾಲಯಗಳ ಕಾರ್ಯನಿರ್ವಹಣೆ, ಶೌಚಾಲಯಗಳನ್ನು ಅಂದಗೊಳಿಸಲು ಬಿಡಿಸಿರುವ ಚಿತ್ರಕಲೆ, ಗೋಡೆ ಬರಹ, ಸೌಂದರೀಕರಣ ಹಾಗೂ ಉತ್ತಮ ವೈಯಕ್ತಿಕ ಶೌಚಾಲಯ ಮತ್ತು ಸಮುದಾಯ ಶೌಚಾಲಯಗಳನ್ನು ಮೌಲ್ಯಮಾಪನ ಮಾಡಿ, ಪುರಸ್ಕಾರ/ ನಗದು ಬಹುಮಾನಕ್ಕಾಗಿ ನೀಡಲಾಗುವುದು.

ಗ್ರಾಮ ಪಂಚಾಯಿತಿ ಹಂತದಲ್ಲಿ ಸ್ವಚ್ಛ, ಸುಂದರ ವೈಯಕ್ತಿಕ ಗೃಹ ಶೌಚಾಲಯ (ಉತ್ತಮ ಶೌಚಾಲಯ) ಸ್ಪರ್ಧೆ ಮತ್ತು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಉತ್ತಮ ಸಮುದಾಯ ಶೌಚಾಲಯ ಸ್ಪರ್ಧೆಗಳನ್ನು ಆಯೋಜಿಸಿ, ವಿಜೇತರಿಗೆ ಪುರಸ್ಕಾರಗಳನ್ನು ನೀಡಿ ಗೌರವಿಸಲಾಗುವುದು.

ಜಿಲ್ಲೆಗಳಲ್ಲಿರುವ ಕೈಗಾರಿಕೆಗಳು, ಸ್ವಯಂ ಸೇವಾ ಸಂಘಗಳು, ಸರ್ಕಾರೇತರ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು, ಇತರ ಸಾಂಸ್ಥಿಕ ಸಂಸ್ಥೆಗಳನ್ನು ಗುರುತಿಸಿ, ಈ ಆಂದೋಲನದ ಭಾಗವಾಗಿರುವ ಫಲಾನುಭವಿಗಳಿಗೆ ಪುರಸ್ಕಾರ ವಿತರಣೆ, ಶೌಚಾಲಯಗಳ ಸೌಂದರ್ಯಕರಣ ಪುರಸ್ಕಾರ ನೀಡಲಾಗುವುದು.

ನಮ್ಮ ಶೌಚಾಲಯ ನಮ್ಮ ಗೌರವ ವಿಶೇಷ ಅಭಿಯಾನದ ಅವಧಿಯಲ್ಲಿ ಜಿಲ್ಲೆಯಲ್ಲಿ ನಿರುಪಯುಕ್ತ ಸಮುದಾಯ ಶೌಚಾಲಯಗಳನ್ನು ಗುರುತಿಸಿ , ಅವುಗಳನ್ನು ಬಳಕೆಗೆ ಯೋಗ್ಯ ರೀತಿಯಲ್ಲಿ ಪರಿವರ್ತಿಸಲಾಗುವುದು. ನೈರ್ಮಲ್ಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿರುವ ಸ್ವಚ್ಛತಾ ಕಾರ್ಮಿಕರು. ಸ್ವಚ್ಛತಾಗಾರರನ್ನು ಗುರುತಿಸಿ, ಅವರಿಗೆ ಸೂಕ್ತ ಗೌರವಗಳನ್ನು ನೀಡಿ ಅವರಿಗೆ ವಿವಿಧ ಯೋಜನೆಗಳಡಿ ದೊರೆಯುವ ಸೌಲಭ್ಯಗಳನ್ನು ಒದಗಿಸಲು ನೋಂದಾಯಿಸಿ, ಅವರಿಗೆ ಮಂಜೂರಾತಿ ಆದೇಶಗಳನ್ನು ನೀಡಲಾಗುವುದು. ಜಿಲ್ಲೆಯಾದ್ಯಂತ ಸುರಕ್ಷಿತ ನೈರ್ಮಲ್ಯ, ಶುಚಿತ್ವ ಕುರಿತಂತೆ ವ್ಯಾಪಕ ಜಾಗೃತಿ ಮೂಡಿಸಲಾಗುವುದು: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಭರತ್ ಎಸ್ ಅವರು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net