ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ

27GDG06
Published on

*ಈಗಾಗಲೇ ಅನುಮೋದನೆಕೊಂಡ ಕಾಮಗಾರಿಯನ್ನು ನಿಗದಿತ ಅವಧಿಯಲ್ಲಿ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು*

ಗದಗ: ಅನುಮೋದನೆಕೊಂಡ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಉತ್ತಮ ಗುಣಮಟ್ಟದೊಂದಿಗೆ ಪೂರ್ಣಗೊಳಿಸಬೇಕು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ರಮಣದೀಪ್ ಚೌಧರಿ ಅವರು ಹೇಳಿದರು.

ನಗರದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಬುಧವಾರ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೆಲವು ಇಲಾಖೆಯ ಕಾಮಗಾರಿಗಳ ಕ್ರಿಯಾ ಯೋಜನೆಗಳು ಬದಲಾವಣೆಗೊಂಡಿದ್ದು ಬದಲಾವಣೆಗೊಂಡ ಕಾಮಗಾರಿಗಳನ್ನು ಒಳಗೊಂಡAತೆ ಈಗಾಗಲೇ ಅನುಮೋದನೆಗೊಂಡ ಕಾಮಗಾರಿಗಳನ್ನು ಉತ್ತಮ ಗುಣಮಟ್ಟದಿಂದ ಪೂರ್ಣಗೊಳಿಸಬೇಕು, ಕೃಷಿ ಬೆಳೆಗಳ ವಿಮೆ ಬಗ್ಗೆ ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಎಂದರು.

ಜಿಲ್ಲೆಯಲ್ಲಿನ ಅಂಗನವಾಡಿಗಳಲ್ಲಿ ಉತ್ತಮ ರೀತಿಯ ಗಾಳಿ ಬೆಳಕು ಸೇರಿದಂತೆ ಮೂಲಭೂತ ಸೌಕರ್ಯಗಳು ಇರುವಂತೆ ನೋಡಿಕೊಳ್ಳಬೇಕು, ಈ ಬಾರಿ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆ ಯಲ್ಲಿ ಜಿಲ್ಲೆಯು ಉತ್ತಮ ಫಲಿತಾಂಶ ಹೊಂದುವAತೆ ಎಲ್ಲರೂ ಶ್ರಮಿಸಬೇಕು, ವಿವಿಧ ಇಲಾಖೆಗಳ ವಸತಿ ನಿಲಯಗಳಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಅನುಕೂಲಕರ ವಾತಾವರಣ ನಿರ್ಮಾಣ ಮಾಡುವುದು ಇಲಾಖೆ ಅಧಿಕಾರಿಗಳ ಆದ್ಯ ಕರ್ತವ್ಯವಾಗಿದೆ ಎಂದು ಹೇಳಿದರು.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಭರತ ಎಸ್ ಅವರು ಮಾತನಾಡಿ ಜಿಲ್ಲೆಯಲ್ಲಿ ನಗರ ಸಮುದಾಯ ಆರೋಗ್ಯ ಕೇಂದ್ರ ಸ್ಥಾಪಿಸಲು ನಗರದ ಹೃದಯ ಭಾಗದಲ್ಲಿನ ಕಟ್ಟಡದ ಲಭ್ಯವಿದೆ. ಹಾಗಾಗಿ ಭಾರತ ಸರ್ಕಾರದ ಎನ್‌ಎಚ್‌ಎಮ್‌ನಿಂದ ಅನುಮೋದನೆ ನೀಡಿದರೆ ಸಾರ್ವಜನಿಕರಿಗೆ ಅನುಕೂಲ ಆಗುತ್ತದೆ ಎಂದು ತಿಳಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕಿ ತಾರಾಮಣಿ ಮಾತನಾಡಿ ಜಿಲ್ಲೆಯಲ್ಲಿ ಹಿಂಗಾರಿನಲ್ಲಿ ಕಡಲೆ,ಜೋಳ,ಗೋದಿ,ಬೆಳೆಗಳ ಬೆತ್ತನೆಯಾಗಿದೆ ಹಾಗೂ ಬಿತ್ತನೆ ಬೀಜ ಹಾಗೂ ರಸ ಗೊಬ್ಬರ ಸಮರ್ಪಕ ಪ್ರಮಾಣದಲ್ಲಿ ಲಭ್ಯವಿದ್ದು ಯಾವುದೇ ಅಭಾವವಿರುವುದಿಲ್ಲ. ರೈತರಿಗೆ ಈಗಾಗಲೇ ಬೆಳೆ ವಿಮೆ ಬಗ್ಗೆ ಮಾಹಿತಿ ನೀಡಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ಮಹೇಶ ಪೋತದಾರ ಮಾತನಾಡಿ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ 42 ವಸತಿ ನಿಲಯಗಳಿದ್ದು, ಅದರಲ್ಲಿ 35 ವಸತಿ ನಿಲಯಗಳಿಗೆ ಸ್ವಂತ ಕಟ್ಟಡವಿದೆ, ಉಳಿದ ವಸತಿ ನಿಲಯಗಳಿಗೆ ಜಾಗ ಲಭ್ಯವಿದ್ದು ಈಗಾಗಲೇ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೆಶಕ ಆರ್ ಎಸ್ ಬುರಡಿ ಮಾತನಾಡಿ ಎಲ್ಲಾ ಶಾಲೆಗಳಲ್ಲಿ ಉತ್ತಮ ಭೋದನೆ ನಡೆಯುತ್ತಿದ್ದು,ಶಿಕ್ಷಕರ ಕೊರತೆಯಿರುವ ಶಾಲೆಗಳಲ್ಲಿ ಅತಿಥಿ ಶಿಕ್ಷಕರನ್ನು ನೇಮಿಕ ಮಾಡಲಾಗಿದೆ. ವಿವೇಕ ಯೋಜನೆಯಡಿ 95 ಶಾಲೆಗಳಲ್ಲಿ 124 ಕೊಠಡಿಗಳ ನಿರ್ಮಿಸಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಸಭೆಯಲ್ಲಿ ತೋಟಗಾರಿಕೆ ಇಲಾಖೆ,ಮೀನುಗಾರಿಕೆ ಇಲಾಖೆ,ಶಿಕ್ಷಣ ಇಲಾಖೆ,ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರೇಶ್ಮೆ, ಪಶು ಸಂಗೋಪನೆ, ವಿಕಲಚೇತನರ ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಗ್ರಾಮೀಣ ಕುಡಿಯುವ ನೀರುಸರಬರಾಜು ಮತ್ತು ನೈರ್ಮಲ್ಯ ವಿಭಾಗ ಸೇರಿದಂತೆ ವಿವಿಧ ಇಲಾಖೆಯ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯನ್ನು ಚರ್ಚಿಸಲಾಯಿತು. .

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿ.ಪಂಉಪಕಾರ್ಯದರ್ಶಿ ಸಿಆರ್ ಮುಂಡರಗಿ, ಹಿಂದುಳಿದ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ರವಿ ಗುಂಜಿಕರ್,ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಶಿಕಾಂತಿ ಕೋಟಿಮನಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ನೀಲಗುಂದ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದು ಇಲಾಖೆಯ ಮಾಹಿತಿ ಒದಗಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net