ಶಿಕ್ಷಕರೊಂದಿಗೆ ಜಿಪಂ ಸಿಇಒ ಸಂವಾದ

01GDG03
Published on

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯ ಶೈಕ್ಷಣಿಕ ಗುಣಮಟ್ಟ ಉನ್ನತಗೊಳಿಸಲು ಹಾಗೂ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಎಸ್ಸೆಸ್ಸೆಲ್ಸಿ ಉತ್ತಮ ಫಲಿತಾಂಶಕ್ಕಾಗಿ ಮುಂದಿನ ದಿನಗಳಲ್ಲಿ ಪ್ರತಿ ಪ್ರೌಢ ಶಾಲೆಗಳಲ್ಲಿ ಉತ್ತಮ ರೀತಿಯ ವಿನೂತನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಪಂ ಸಿಇಓ ಭರತ್​ ಎಸ್​ ಹೇಳಿದರು.
ಜಿಪಂ ಸಭಾಂಗಣದಲ್ಲಿ ಶನಿವಾರ ಶಿಕ್ಷಕರೊಂದಿಗೆ ಏರ್ಪಡಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರಿಯಾದ ಯೋಜನೆ ಹಾಗೂ ಪರಿಣಾಮಕಾರಿ ಅನುಷ್ಠಾನ, ಚಟುವಟಿಕೆ ಆಧಾರಿತ ಕಲಿಕೆ, ಶಿಸ್ತಿನಿಂದ ಶಾಲಾ ಹಂತದ ಟಕ ಪರೀಕ್ಷೆ ಹಾಗೂ ಜಿಲ್ಲಾ ಪರೀಕ್ಷೆ ಸಂಟನೆ ಯೋಜನೆಗಳನ್ನು ಶಾಲೆಯಲ್ಲಿ ಅನುಷ್ಠಾನಕ್ಕೆ ತರಬೇಕು. ಜಿಲ್ಲೆಯ "ಶೈಕ್ಷಣಿಕ ಅಭಿವೃದ್ಧಿ ಯೋಜನೆ' ಹಾಗೂ "ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗಾಗಿ ಹಾಕಿಕೊಂಡ ಚಟುವಟಿಕೆಗಳ' ಬಗ್ಗೆ ಹಾಗೂ ತಮ್ಮ ಶಾಲೆಯ ವಿದ್ಯಾಥಿರ್ಗಳಿಗಾಗಿ ತಮ್ಮ ಮಿತಿಯಲ್ಲಿ ವಿಶೇಷ ಚಟುವಟಿಕೆಗಳನ್ನು ಆಯೋಜಿಸುವಂತೆ ಭರತ್​ ಎಸ್​ ಹೇಳಿದರು.
ಜಿಲ್ಲಾ ಹಂತದ ಪರೀಕ್ಷೆ:
ಜಿಲ್ಲೆಯಲ್ಲಿ ಏಕಕಾಲಕ್ಕೆ ನಾಲ್ಕು ವಿಶೇಷ ಪರೀಕ್ಷೆಗಳನ್ನು ನಡೆಸಲಾಗುವುದು. ಪ್ರಶ್ನೆ ಪತ್ರಿಕೆಗಳನ್ನು ಜಿಲ್ಲಾ ಮಟ್ಟದಲ್ಲಿ ತಯಾರಿಸಿ, ಶಾಲಾ ಹಂತದಲ್ಲಿ ಪರೀಕ್ಷೆ ಸಂಟಿಸಿ, ಜಿಲ್ಲಾ ಹಾಗೂ ತಾಲೂಕು ಶಾಲಾ ಮಟ್ಟದಲ್ಲಿ ಮಕ್ಕಳ ಫಲಿತಾಂಶ ವಿಶ್ಲೇಷಣೆ ಮಾಡಲಾಗುವುದು. ಫಲಿತಾಂಶ ಆಧರಿಸಿ ವಿದ್ಯಾಥಿರ್ಗಳ ಉತ್ತಮ ಫಲಿತಾಂಶಕ್ಕಾಗಿ ಶಾಲೆಯಲ್ಲಿ ಚಟುವಟಿಕೆಗಳನ್ನು ರೂಪಿಸಬೇಕು ಎಂದು ಶಿಕ್ಷಕರಿಗೆ ಕರೆ ನೀಡಿದರು.
ಡಿಡಿಪಿಐ ಜಿ. ಎಲ್​. ಬಾರಾಟಕ್ಕೆ, ಆರ್​. ಎಸ್​. ಬುರಡಿ, ವಿ. ವಿ. ನಡುವಿನಮನಿ, ಎಚ್​. ಬಿ. ರಡ್ಡೇರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net