

ಗದಗ: ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಭರತ್ ಎಸ್. ಅವರು ಗದಗ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ನರೇಗಾ ಹಾಗೂ ಪಂಚಾಯತ್ ರಾಜ್ ಇಲಾಖೆಯಡಿ ಅನುಷ್ಠಾನವಾದ ಕಾಮಗಾರಿಗಳನ್ನು ಪರಿಶೀಲನೆ ನಡೆಸಿದರು.
ತಾಲೂಕಿನ ನಾಗವಿ, ಬೆಳಧಡಿ ಹಾಗೂ ಹರ್ತಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಸಿಸಿ ರಸ್ತೆ ಹಾಗೂ ಚರಂಡಿ ಕಾಮಗಾರಿ, ಬೂದು ನಿರ್ವಹಣೆ ಕಾಮಗಾರಿ, ಘನತ್ಯಾಜ್ಯ ವಿಲೇವಾರಿ ಘಟಕ ಸೇರಿದಂತೆ ವಿವಿಧ ಕಾಮಗಾರಿಗಳನ್ನು ವೀಕ್ಷಣೆ ಮಾಡಿ ಕಾಮಗಾರಿ ಕಡತಗಳು ಹಾಗೂ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಅಳತೆಯ ಪ್ರಮಾಣವನ್ನು ಪರಿಶೀಲನೆ ನಡೆಸಿದರು .
ಈ ಸಂದರ್ಭದಲ್ಲಿ ಗದಗ ತಾಲೂಕ ಪಂಚಾಯತಿಯ ಸಹಾಯಕ ನಿರ್ದೇಶಕ ( ಗ್ರಾ ಉ), ಸದರ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ತಾಲೂಕ ಮಟ್ಟದ ಅಧಿಕಾರಿಗಳು, ನರೇಗಾ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಜರಿದ್ದರು.