ನರೇಗಾ ಯೋಜನೆಯಡಿ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಮಾಡುವುದು ಪ್ರಮುಖ ಉದ್ದೇಶವಾಗಿದ್ದು,ಈ ನಿಟ್ಟಿನಲ್ಲಿ ಪ್ರತಿ ಗ್ರಾಮ ಪಂಚಾಯತಿಯಲ್ಲಿ ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಉಪಚಾರದ ಗ್ರಾಮೀಣ ಕೆರೆ ಹೂಳೆತ್ತುವ ಕಾಮಗಾರಿ, ಬದು ನಿರ್ಮಾಣ, ಕೊಳವೆ ಭಾವಿ, ಮರು ಪೂರಣ ಘಟಕ, ನಾಲಾ ಅಭಿವೃದ್ಧಿ, ಅರಣ್ಣಿಕರಣ, ರೇಷ್ಮೆ ಬೆಳೆ, ತೋಟಗಾರಿಕೆ, ಗೋಕಟ್ಟೆ ನಿರ್ಮಾಣ ಇನ್ನು ಹಲವು ಕಾಮಗಾರಿಗಳಲ್ಲಿ ಕೂಲಿಕಾರರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸಲು ಯೋಜನೆ ರೂಪಿಸಲಾಗಿದ್ದು ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕೂಲಿಕಾರರಿಗೆ ಕೂಲಿ ಹಣವನ್ನು ಇ-ಎಫ್‌ಎಂಎಸ್ ಮುಖಾಂತರ ನೇರವಾಗಿ ಕೂಲಿಕಾರರ ವೈಯಕ್ತಿಕ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡಲಾಗುತ್ತದೆ ಮಹಿಳೆ ಹಾಗೂ ಪುರುಷರಿಗೆ ಸಮಾನ ಕೂಲಿ ನೀಡುವುದರಿಂದ ಸದರಿ ಪ್ರಯೋಜನ ವನ್ನು ಉದ್ಯೋಗ ಚೀಟಿ ಹೊಂದಿರುವ ಗ್ರಾಮೀಣ ಕುಟುಂಬಗಳು ಪಡೆದುಕೊಳ್ಳುವುದು, ಹಾಗೂ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಬೆಸಿಗೆ ಕಾಲದ ಹಿನ್ನಲೆಯಲ್ಲಿ ಗ್ರಾಮೀಣ ಜನರು ಉದ್ಯೋಗ ಬೇಡಿಕೆ ನೀಡಿದ ತಕ್ಷಣ ಉದ್ಯೋಗ ಒದಗಿಸಲು ಹಾಗೂ ಸಕಾಲದಲ್ಲಿ ಕೂಲಿ ಪಾವತಿ ಮಾಡಲು ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮತ್ತು ಅನುಷ್ಟಾನ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು..