sankalp: ದುಶ್ಚಟ ಮುಕ್ತ ಸಮಾಜಕ್ಕೆ ಸಂಕಲ್ಪ ಅಗತ್ಯ

ಲಕ್ಷ್ಮೇಶ್ವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಎಎಸ್‌ಐ ಮೀನಾಕ್ಷಿ ಮಟ್ಟಿ ಉದ್ಘಾಟಿಸಿದರು.
ಲಕ್ಷ್ಮೇಶ್ವರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮವನ್ನು ಎಎಸ್‌ಐ ಮೀನಾಕ್ಷಿ ಮಟ್ಟಿ ಉದ್ಘಾಟಿಸಿದರು.
Published on
ಲಕ್ಷ್ಮೇಶ್ವರ: ಮಾದಕ ವಸ್ತುಗಳ (drugs) ವ್ಯಸನದಿಂದ ಮಕ್ಕಳ ಆರೋಗ್ಯ, ಕುಟುಂಬ ಹಾಗೂ ಸಮಾಜದ ಸ್ವಾಸ್ಥ್ಯ ಹದಗೆಡುತ್ತಿದೆ ಎಂದು ಎಎಸ್‌ಐ ಮೀನಾಕ್ಷಿ ಮಟ್ಟಿ ಹೇಳಿದರು.
ಪಟ್ಟಣದ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ’ಸ್ವಾಸ್ಥ್ಯ ಸಂಕಲ್ಪ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ದುಶ್ಚಟ ಮುಕ್ತ ಸಮಾಜ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಮಹತ್ವದ್ದಾಗಿದೆ. ವಿದ್ಯಾರ್ಥಿಗಳು ತಾವು ಪಡೆಯುವ ಶಿಕ್ಷಣ, ಮೌಲ್ಯಗಳು, ಸಾಮಾಜಿಕ ಚಿಂತನೆ, ಕರ್ತವ್ಯಗಳಿಂದ ಆರೋಗ್ಯಕರ, ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಂಕಲ್ಪಮಾಡಬೇಕು. ವಿದ್ಯಾರ್ಥಿಗಳು ಪೋಕ್ಸೋ, ಬಾಲ್ಯ ವಿವಾಹ ನಿಷೇಧ, ಲೈಂಗಿಕ ದೌರ್ಜನ್ಯ ತಡೆ ಕಾಯ್ದೆಗಳ ಕುರಿತು ಅರಿವು ಹೊಂದಬೇಕು. ಜನ ಜಾಗೃತಿ ಕಾರ್ಯದಲ್ಲಿ ತೊಡಗಿರುವ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದರು.
ಯೋಜನೆಯ ಮೇಲ್ವಿಚಾರಕ ನಿಂಗಪ್ಪ ಪಾಟೀಲ ಮಾತನಾಡಿ, ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಮದ್ಯವರ್ಜನ ಶಿಬಿರ, ಮಹಿಳೆಯರಿಗಾಗಿ ಜ್ಞಾನ ವಿಕಾಸ ಕಾರ್ಯಕ್ರಮ ಸೇರಿದಂತೆ ವಿವಿಧ ಸಮುದಾಯ ಅಭಿವೃದ್ಧಿ ಯೋಜನೆಗಳನ್ನು ಸಂಸ್ಥೆ ನಿರಂತರವಾಗಿ ನಡೆಸುತ್ತಿದೆ ಎಂದರು.
ಅಧ್ಯಕ್ಷತೆ ವಹಿಸಿದ್ದ ಮುಖ್ಯೋಪಾಧ್ಯಾಯ ಬಿ.ಸಿ. ಪಟ್ಟೇದ ಮಾತನಾಡಿ, ಮಕ್ಕಳಿಗೆ ಚಿಕ್ಕಂದಿನಿಂದಲೇ ದುಶ್ಚಟಗಳ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಕುಟುಂಬದ ಪ್ರತಿಯೊಬ್ಬರೂ ದುಶ್ಚಟಗಳಿಂದ ದೂರವಿದ್ದರೆ ಆರೋಗ್ಯವಂತ ಸಮಾಜ ಹಾಗೂ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದರು.
ಶಾಲೆಯ ಸಹ ಶಿಕ್ಷಕರು, ಸೇವಾ ಪ್ರತಿನಿಧಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು. ಎ.ಎಂ. ಅಕ್ಕಿ ನಿರೂಪಿಸಿದರು. ಎನ್.ಬಿ. ರಡ್ಡೇರ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net