ಹೌದು, ಪಟ್ಟಣದ ಮರಿಯಪ್ಪ ಬಾಳಪ್ಪ ಕಳಕೊಣ್ಣವರ ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ನಾಲ್ಕು ವಿದ್ಯಾರ್ಥಿಗಳು ಅಗ್ನಿವೀರಗೆ ಆಯ್ಕೆಯಾಗಿದ್ದಾರೆ. ಇತ್ತೀಚೆಗೆ ನಡೆದ ನೇಮಕಾತಿ ಪ್ರಕ್ರಿಯೆಯಲ್ಲಿ ಭಾಗವಹಿಸಿದ್ದ ಬಿಎ 6ನೇ ಸೆಮಿಸ್ಟರ್‌ನ ಕಳಕಾಪುರ ಗ್ರಾಮದ ಶಾರುಖ್ ಹಸನಸಾಬ್ ಗೌಡರ, ಬಿಎ 4ನೇ ಸೆಮಿಸ್ಟರ್‌ನ ಮಾರನಬಸರಿ ಗ್ರಾಮದ ಬಸವರಾಜ್ ಲಂಕೆಪ್ಪ ಕುರಿ, ಬಿಎ 4ನೇ ಸೆಮಿಸ್ಟರ್‌ನ ಜಕ್ಕಲಿ ಗ್ರಾಮದ ಶಬ್ಬೀರಸಾಬ್ ಅಲ್ಲಿಸಾಬ್ ಬಸಾಪುರ ಮತ್ತು ಬಿಎಸ್‌ಸಿ 4ನೇ ಸೆಮಿಸ್ಟರ್‌ನ ಜಕ್ಕಲಿ ಗ್ರಾಮದ ಶಂಕರಪ್ಪ ಮಲ್ಲಪ್ಪ ಇಟಗಿ ಆಯ್ಕೆಯಾಗಿದ್ದಾರೆ.