Corruption: ಚಂದ್ರು ಲಮಾಣಿ ಕೂಡಲೇ ರಾಜೀನಾಮೆ ನೀಡಲಿ

ಶಾಸಕ ಡಾ.ಚಂದ್ರು ಲಮಾಣಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಸುಜಾತಾ ದೊಡ್ಡಮನಿ ಇತರರಿದ್ದರು.
ಶಾಸಕ ಡಾ.ಚಂದ್ರು ಲಮಾಣಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮಾಜಿ ಶಾಸಕ ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಸುಜಾತಾ ದೊಡ್ಡಮನಿ ಇತರರಿದ್ದರು.
Published on
ವಿಜಯವಾಣಿ ಸುದ್ದಿಜಾಲ ಲಕ್ಷ್ಮೇಶ್ವರ
ಶಾಸಕ ಡಾ.ಚಂದ್ರು ಲಮಾಣಿ ಭ್ರಷ್ಟಾಚಾರದ ಪ್ರಕರಣದಲ್ಲಿ ನ್ಯಾಯಾಂಗ ಬಂಧನಕ್ಕೊಳಗಾಗಿದ್ದಾರೆ. ಈ ಮೂಲಕ ಕ್ಷೇತ್ರದ ಜನರ ನಂಬಿಕೆ, ವಿಶ್ವಾಸಕ್ಕೆ ದ್ರೋಹ ಮಾಡಿದ್ದಾರೆ. ಇವರಿಗೆ ಅಧಿಕಾರದ ಮುಂದುವರೆಯುವ ಯಾವುದೇ ನೈತಿಕ ಹಕ್ಕಿಲ್ಲ. ಕೂಡಲೇ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಮಾಜಿ ಶಾಸಕ ರಾಮಣ್ಣ ಲಮಾಣಿ ಆಗ್ರಹಿಸಿದರು.
ಸೋಮವಾರ ಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿರಹಟ್ಟಿ ಮತಕ್ಷೇತ್ರ ರಾಜಕೀಯ ಕ್ಷೇತ್ರದಲ್ಲಿ ಉತ್ತಮ ಹೆಸರು ಮಾಡಿದೆ. ಆದರೆ, ವಿದ್ಯಾವಂತನೆಂದು ಜನರು ಕೊಟ್ಟ ಅವಕಾಶ ದುರುಪಯೋಗ ಮಾಡಿಕೊಂಡು ಲಂಚದ ಮೂಲಕ ಕ್ಷೇತ್ರಕ್ಕೆ ಮಸಿ ಬಳಿಯುವ ಕೆಲಸವನ್ನು ಚಂದ್ರ ಲಮಾಣಿ ಮಾಡಿದ್ದಾರೆ. ಅಧಿಕಾರದ ಮದದಿಂದ ಕ್ಷೇತ್ರದ ಅಭಿವೃದ್ಧಿ ಹಣ ಕೊಳ್ಳೆ ಹೊಡೆದು ಯಾವುದೇ ಅಭಿವೃದ್ದಿ ಕೆಲಸ ಮಾಡಿಲ್ಲ. ಬಿಜೆಪಿಗೆ ನೈತಿಕತೆ ಇದ್ದರೆ ಇವರಿಂದ ರಾಜೀನಾಮೆ ಪಡೆಯಬೇಕು ಎಂದರು.
ಮಾಜಿ ಶಾಸಕ ರಾಮಕೃಷ್ಣ ದೊಡ್ಡಮನಿ ಮಾತನಾಡಿ, ಕ್ಷೇತ್ರಕ್ಕೆ ಕೋಟ್ಯಂತರ ರೂ. ಅನುದಾನ ಬಂದಿದೆ. ಆದರೆ, ಡಾ.ಚಂದ್ರು ಲಮಾಣಿ ಕಾಂಗ್ರೆಸ್ ಪಕ್ಷದಿಂದ ನಯಾಪೈಸೆ ದುಡ್ಡು ಬಂದಿಲ್ಲ ಎಂದು ಹೇಳುವ ಮೂಲಕ ಜನರಿಗೆ ತಪ್ಪು ಮಾಹಿತಿ ನೀಡುತ್ತ ಭ್ರಷ್ಟಾಚಾರದಲ್ಲಿ ತೊಡಗಿದ್ದರು. ಮಾಡಲು ಸಾಕಷ್ಟು ಕೆಲಸವಿದ್ದರೂ ಅವರ ಚಿತ್ತ ಕೇವಲ ದುಡ್ಡು ಮಾಡುವತ್ತ ಇದೆ ಎಂದು ಹೇಳಿದರು.
ಕೆಪಿಸಿಸಿ ಸದಸ್ಯೆ ಸುಜಾತಾ ದೊಡ್ಡಮನಿ ಮಾತನಾಡಿ, ಭ್ರಷ್ಟಾಚಾರ ಮಾಡಿದ ಶಾಸಕನನ್ನು ಬಿಜೆಪಿ ಸಮರ್ಥಿಸಿಕೊಂಡರೆ, ಬೆಂಬಲಿಸಿದರೆ ಇದು ಬಿಜೆಪಿ ಸಂಸ್ಕೃತಿಯನ್ನು ಸಾಕ್ಷೀಕರಿಸಿದಂತಾಗುತ್ತದೆ. ಲೋಕಾಯುಕ್ತ ಸ್ವಾಯತ್ತ ಸಂಸ್ಥೆಯಾಗಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಬಂಧಿಯಾಗಿರುವ ಶಾಸಕನನ್ನು ಬೆಂಬಲಿಸುವ ಬಿಜೆಪಿಗರು ಮೊದಲು ಆತ್ಮಸಾಕ್ಷಿ ಕೇಳಿಕೊಳ್ಳಿಲಿ. ಭ್ರಷ್ಟಾಚಾರ ಮಾಡಿದ್ದಲ್ಲದೇ ಕಾಂಗ್ರೆಸ್ ಪಕ್ಷದ ವಿರುದ್ಧ ಸುಳ್ಳು ಆರೋಪದ ಹೋರಾಟ ಮಾಡುವ ವಿಚಾರವೂ ವ್ಯಕ್ತವಾಗಿದೆ. ಬಿಜೆಪಿಗರು ಹೋರಾಟಕ್ಕೆ ಬೆಂಬಲ ನೀಡಬಾರದು ಎಂದು ಮನವಿ ಮಾಡಿದರು.
ಬಳಿಕ ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಶಾಸಕ ಡಾ.ಚಂದ್ರು ಲಮಾಣಿ ಅವರ ರಾಜೀನಾಮೆ ಪಡೆಯಬೇಕು ಎಂದು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ಚನ್ನಪ್ಪ ಜಗಲಿ, ಕಾಂಗ್ರೆಸ್ ಪಕ್ಷದ ಬ್ಲಾಕ್ ಕಮಿಟಿ ಅಧ್ಯಕ್ಷ ಜಿ.ಆರ್. ಕೊಪ್ಪದ, ಫಕ್ಕಿರೇಶ ಮ್ಯಾಟಣ್ಣವರ, ವಿರೇಂದ್ರ ಪಾಟೀಲ, ನಾಗರಾಜ ಮಡಿವಾಳರ, ಎಸ್.ಪಿ. ಬಳಿಗಾರ, ಶರಣು ಗೋಡಿ, ಸೋಮಣ್ಣ ಬೆಟಗೇರಿ, ರಾಮಣ್ಣ ಲಮಾಣಿ(ಶಿಗ್ಲಿ), ಯಲ್ಲಪ್ಪ ಸೂರಣಗಿ, ನೀಲಪ್ಪ ಶರಸೂರಿ, ಶಿವಣ್ಣ ಕಬ್ಬೇರ, ಕಲ್ಲಪ್ಪ ಗಂಗಣ್ಣವರ, ಮನೋಜ ರಾಟೋಡ, ಜಗದೀಶ ಹುಲಿಗೆಮ್ಮನವರ, ಶಿವರಾಜಗೌಡ ಪಾಟೀಲ, ಪರಮೇಶ ಲಮಾಣಿ, ತಿಪ್ಪಣ್ಣ ಸಂಶಿ, ನಾಗರಾಜ ದೊಡ್ಡಮನಿ, ವಾಸೀಂ ಅಕ್ರಮ ಮುಚ್ಚಾಲೆ, ರಾಜು ಓಲೇಕಾರ, ರಾಜರತ್ನ ಹುಲಗೂರ, ನೀಲಪ್ಪ ಪಡಗೇರಿ, ಶಶಿಕಲಾ ಬಡಿಗೇರ, ರಫೀಕ ಕಲಬುರ್ಗಿ, ಸಂತೋಷ ತೇಲಿ, ರಂಜಾನಸಾಬ ನಧಾಪ್ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net