ಎಬಿವಿಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸಚಿನ್ ಕುಂದರಗಿ ಮಾತನಾಡಿ, ಸರ್ಕಾರದ ವಿವಿಧ ಇಲಾಖೆಗಳಲ್ಲಿ ಸಾವಿರಾರು ಹುದ್ದೆಗಳು ಖಾಲಿಯಿವೆ, ಅವುಗಳನ್ನು ಭರ್ತಿ ಮಾಡದೆ ಸರ್ಕಾರ ಯುವಜನರನ್ನು ಉದ್ಯೋಗ ವಂಚಿತರನ್ನಾಗಿ ಮಾಡುತ್ತಿದೆ, ಈ ಹಿನ್ನೆಲೆಯಲ್ಲಿ ಕೂಡಲೇ ಅಧಿಸೂಚನೆ ಹೊರಡಿಸಿ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ವಿಶ್ವ ವಿದ್ಯಾಲಯಗಳಿಗೆ ಅನುದಾನ ನೀಡಬೇಕು, ಸಮರ್ಪಕವಾಗಿ ವಿದ್ಯಾರ್ಥಿ ವೇತನ ತಲುಪಿಸಬೇಕು. ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಫಲಿತಾಂಶ ಪ್ರಕಟಿಸಿ ಅಂಕಪಟ್ಟಿ ನೀಡಬೇಕು, ವಿವಿಧ ಇಲಾಖೆಯಲ್ಲಿ ಆಯ್ಕೆ ಸಂದರ್ಭದಲ್ಲಿ ವಯೋಮಿತಿ ಸಡಿಲಿಕೆ ಮಾಡಬೇಕು ಎಂದು ಆಗ್ರಹಿಸಿದರು.