Demand ಡೊನೇಷನ್ ಹಾವಳಿ ತಡೆಗಟ್ಟಲು ಆಗ್ರಹ

ಗಜೇಂದ್ರಗಡದಲ್ಲಿ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶಿವಾಲಾಲ್ ನಾಯಕ ಅವರಿಗೆ ಎಸ್‌ಎಫ್‌ಐ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.
ಗಜೇಂದ್ರಗಡದಲ್ಲಿ ತಹಸೀಲ್ದಾರ್ ಕಚೇರಿಯ ಶಿರಸ್ತೇದಾರ್ ಶಿವಾಲಾಲ್ ನಾಯಕ ಅವರಿಗೆ ಎಸ್‌ಎಫ್‌ಐ ಸಂಘಟನೆಯಿಂದ ಮನವಿ ಸಲ್ಲಿಸಲಾಯಿತು.
Published on
ಗಜೇಂದ್ರಗಡ: ತಾಲೂಕಿನಲ್ಲಿ ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನಿಯಮಗಳನ್ನು ಮೀರಿ ಡೊನೇಷನ್ (Demand) ವಸೂಲಿಯಲ್ಲಿ ತೊಡಗಿವೆ. ಸೀಟುಗಳ ಲಭ್ಯತೆ, ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ, ನಿಯಮಗಳ ಕುರಿತು ಶಿಕ್ಷಣ ಇಲಾಖೆ ಅನೇಕ ಸುತ್ತೋಲೆ ಹೊರಡಿಸಿದರೂ ಖಾಸಗಿ ಶಾಲೆಗಳು ಹಣ ವಸೂಲಿಯಲ್ಲಿ ತೊಡಗಿವೆ ಎಂದು ಎಸ್‌ಎಫ್‌ಐ ಸಂಘಟನೆ ಆರೋಪಿಸಿದೆ.
ಈ ಕುರಿತು ಶಿರಸ್ತೇದಾರ್ ಶಿವಾಲಾಲ್ ನಾಯಕ ಅವರಿಗೆ ಮನವಿ ಸಲ್ಲಿಸಲಾಯಿತು. ಪ್ರಸಕ್ತ ಸಾಲಿನ ಪ್ರವೇಶಾತಿ ದಿನಾಂಕವನ್ನು ಸರ್ಕಾರ ನಿಗದಿಪಡಿಸಿಲ್ಲ. ಹೀಗಿದ್ದರೂ ಖಾಸಗಿ ಶಿಕ್ಷಣ ಸಂಸ್ಥೆಗಳು ಪ್ರವೇಶ ಪ್ರಕ್ರಿಯೆಗಳನ್ನು ಪ್ರಾರಂಭಿಸಿವೆ ಎಂದು ಎಸ್‌ಎಫ್‌ಐ ಜಿಲ್ಲಾಧ್ಯಕ್ಷ ಚಂದ್ರು ರಾಠೋಡ ದೂರಿದರು.
ಜಿಲ್ಲಾದ್ಯಂತ ಖಾಸಗಿ ಶಾಲೆಗಳು, ಶಿಕ್ಷಣ ಸಂಸ್ಥೆಗಳು ತಲೆ ಎತ್ತುತ್ತಿವೆ. ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುತ್ತಿವೆ. ಜಿಲ್ಲೆಯಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಹೆಸರಲ್ಲಿ ಡೋನೆಷನ್ ಮನಬಂದಂತೆ ಸಂಗ್ರಹಿಸಲಾಗುತ್ತಿದೆ. ಇದರಿಂದ ಬಡವರು, ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರ ಮಕ್ಕಳು ಖಾಸಗಿ ಶಾಲೆಗಳಲ್ಲಿ ಓದುವುದು ಕಷ್ಟವಾಗಿದೆ. ಸರ್ಕಾರ ಇದಕ್ಕೆ ಕಡಿವಾಣ ಹಾಕಬೇಕು ಎಂದು ಆಗ್ರಾಹಿಸಿದರು. ಎಸ್‌ಎಫ್‌ಐ ತಾಲೂಕಾಧ್ಯಕ್ಷ ಅನಿಲ ಆರ್., ಶರಣಪ್ಪ ಮಾಟರಂಗಿ, ಕವಿತಾ ಹೊಸಮನಿ, ಗುರುಕಿರಣ, ಶಿವರಾಜ, ಗಣೇಶ, ಪ್ರಸನ್ನ ಮೂರ್ತಿ, ಪ್ರೇಮಕುಮಾರ, ರೇವಣ್ಣ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net