

ಬೀದಿ ನಾಯಿಗಳ ನಿಯಂತ್ರಣಕ್ಕೆ ಈಗಾಗಲೇ ಎರಡು ಬಾರಿ ಟೆಂಡರ್ ಕರೆಯಲಾಗಿತ್ತು. ನಾಯಿಗಳ ಸಂಖ್ಯೆ ಕಡಿಮೆ ಇರುವುದರಿಂದ ಯಾರೊಬ್ಬರೂ ಟೆಂಡರ್ ಪ್ರಕ್ರಿಯೆನಲ್ಲಿ ಪಾಲ್ಗೊಂಡಿಲ್ಲ. ಸರ್ಕಾರದಿಂದ ಎನಿಮಲ್ ಬರ್ಥ್ ಕಂಟ್ರೋಲ್ ಸೆಂಟರ್ ನಿರ್ಮಾಣಕ್ಕೆ 7.88ಲಕ್ಷ ರೂ. ಅನುದಾನ ಬಿಡುಗಡೆಯಾಗಿದೆ. ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಒಂದು ತಿಂಗಳಲ್ಲಿ ಪಟ್ಟಣದ ಎಪಿಎಂಸಿ ಅಥವಾ ಪುರಸಭೆ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಸಂತಾನ ಹರಣ ಶಸ್ತ್ರ ಚಿಕಿತ್ಸೆಯ ಆರೈಕೆ ಕೇಂದ್ರ ಪ್ರಾರಂಭಿಸಲಾಗುವುದು. ಸಂಗಮೇಶ ಬ್ಯಾಳಿ
ನರಗುಂದ ತಾಲೂಕಿನಲ್ಲಿ ಬೀದಿ ನಾಯಿಗಳ ಸಂಖ್ಯೆ ಕಡಿಮೆ ಇವೆ ಎಂಬ ಕಾರಣಕ್ಕೆ ಟೆಂಡರ್ ಪ್ರಕ್ರಿಯೆಗೆ ಹಿನ್ನೆಡೆ ಉಂಟಾಗಿದೆ. ಪರ್ಯಾಯವಾಗಿ ನರಗುಂದದಲ್ಲಿಯೇ ಎಬಿಸಿ ಆರೈಕೆ ಕೇಂದ್ರ ಪ್ರಾರಂಭಿಸಿ ಸಂತಾನ ಹರಣ ಶಸ್ತ್ರಚಿಕಿತ್ಸೆ ನೀಡುವ ತೀರ್ಮಾನ ಮಾಡಲಾಗಿದೆ.