ಈ ಕುರಿತು ಗುರುವಾರ ಪ್ರಕಟಣೆ ನೀಡಿರುವ ಅವರು, ಶ್ರೀಗಳು ಅಗ್ರಮಾನ್ಯ ಸಾಹಿತಿಗಳಾಗಿದ್ದು, 300ಕ್ಕೂ ಹೆಚ್ಚು ಚುಟುಕುಗಳನ್ನು ಬರೆದಿದ್ದಾರೆ. 160ಕ್ಕೂ ಹೆಚ್ಚು ಪುಸ್ತಕಗಳನ್ನು ಬರೆದು ಸಾಹಿತ್ಯ ಲೋಕವನ್ನು ಶ್ರೀಮಂತಗೊಳಿಸಿದ್ದಾರೆ. ಶ್ರೀಗಳು ಧಾರ್ಮಿಕ, ಸಾಮಾಜಿಕ, ಜನಪರ ಕಾಳಜಿಯ ಕಾರ್ಯಕ್ರಮಗಳನ್ನು ಮಾಡುತ್ತಿದ್ದಾರೆ. ರಾಜ್ಯಮಟ್ಟದ ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್‌ನ ಸರ್ವಾಧ್ಯಕ್ಷರಾಗಿಯೂ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ. ಶ್ರೀಮಠದ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಸಮ್ಮೇಳನ, ರಾಜ್ಯಮಟ್ಟದ ಸಮ್ಮೇಳನ, ಅಖಂಡ ಧಾರವಾಡ ಜಿಲ್ಲಾ ಸಮ್ಮೇಳನವನ್ನು ಸಂಘಟಿಸುವ ಮೂಲಕ ಕಚುಸಾಪದ ಬೆಳವಣಿಗೆಗೆ ಕಾರಣಿಕರ್ತರಾಗಿದ್ದಾರೆ ಎಂದು ತಿಳಿಸಿದ್ದಾರೆ.