ರೈತ ಗಂಗಾಧರ ಗಾಣಿಗೇರ ಪ್ರತಿಕ್ರಿಯಿಸಿ, ಬಾಲೆಹೊಸೂರ, ಸೂರಣಗಿ ಭಾಗದಲ್ಲಿ ಮೆಕ್ಕೆಜೋಳ ಬೆಳೆ ಸಂಪೂರ್ಣ ಒಣಗುವ ಹಂತಕ್ಕೆ ಬಂದಿದೆ. ಮಳೆ ಕೊರತೆಯಿಂದ ಎಲ್ಲವೂ ಹಾಳಾಗುತ್ತಿದೆ. ಸರ್ಕಾರ ತಕ್ಷಣ ಬೆಳೆ ಹಾನಿ ಸಮೀಕ್ಷೆ ನಡೆಸಿ, ಬರಪೀಡಿತ ಪ್ರದೇಶವೆಂದು ಘೋಷಿಸಿ ಸೂಕ್ತ ಪರಿಹಾರ ನೀಡಬೇಕು. ಬೆಳೆ ವಿಮೆ ಪರಿಹಾರವನ್ನು ಶೀಘ್ರವೇ ಬಿಡುಗಡೆ ಮಾಡಬೇಕು. ರೈತರ ಕೃಷಿ ಸಾಲದ ಮರುಪಾವತಿಗೆ ವಿನಾಯಿತಿ ನೀಡಿ, ಮುಂದಿನ ಬಿತ್ತನೆಗೆ ಅಗತ್ಯ ನೆರವು ಒದಗಿಸಬೇಕು. ಕೃಷಿ ಇಲಾಖೆ ಅಧಿಕಾರಿಗಳು ಕೂಡಲೇ ಬೆಳೆ ಹಾನಿಯ ಸಮೀಕ್ಷೆ ನಡೆಸಿ, ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಒತ್ತಾಯಿಸಿದ್ದಾರೆ.