posts: ರಾಜ್ಯದಲ್ಲಿ ನಾಲ್ಕು ಲಕ್ಷ ಹುದ್ದೆಗಳು ಖಾಲಿ

ಲಕ್ಷ್ಮೇಶ್ವರ ಉಮಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಎಸ್.ವಿ. ಸಂಕನೂರ ಮಾತನಾಡಿದರು. ಶಾಸಕ ಡಾ.ಚಂದ್ರು ಲಮಾಣಿ ಇತರರಿದ್ದರು.
ಲಕ್ಷ್ಮೇಶ್ವರ ಉಮಾ ವಿದ್ಯಾಲಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ. ಎಸ್.ವಿ. ಸಂಕನೂರ ಮಾತನಾಡಿದರು. ಶಾಸಕ ಡಾ.ಚಂದ್ರು ಲಮಾಣಿ ಇತರರಿದ್ದರು.
Published on
ಲಕ್ಷ್ಮೇಶ್ವರ: ರಾಜ್ಯದ ವಿವಿಧ 43 ಇಲಾಖೆಗಳಲ್ಲಿ ಸುಮಾರು 2.88 ಲಕ್ಷ ಹುದ್ದೆಗಳು (POSTS) ಖಾಲಿ ಇವೆ. ಇದರ ಜತೆ ನಿಗಮ ಮಂಡಳಿ, ವಿವಿಧ ವಿಶ್ವವಿದ್ಯಾಲಯ ಸೇರಿದಂತೆ ಒಟ್ಟು ನಾಲ್ಕು ಲಕ್ಷ ಹುದ್ದೆಗಳು ಖಾಲಿ ಇವೆ. ಇದರಲ್ಲಿ 56432 ಹುದ್ದೆಗಳನ್ನು ಭರ್ತಿ ಮಾಡುತ್ತಿರುವುದಾಗಿ ಸರ್ಕಾರ ಹೇಳುತ್ತಿರುವುದು ಯಾವ ಪುರುಷಾರ್ಥಕ್ಕೆ. ಚುನಾವಣೆ ಪೂರ್ವದ ಪ್ರಣಾಳಿಕೆಯಲ್ಲಿ ಒಂದು ವರ್ಷದಲ್ಲಿ ಎಲ್ಲ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಹೇಳಿರುವುದು, ಈಗ ಮಾಡುತ್ತಿರುವುದು ಏನು? ಇದು ಜನರಿಗೆ ಮೋಸ ಮಾಡಿದಂತಲ್ಲವೆ? ಎಂದು ವಿಧಾನ ಪರಿಷತ್ ಸದಸ್ಯ ಪ್ರೊ. ಎಸ್.ವಿ. ಸಂಕನೂರ ಪ್ರಶ್ನಿಸಿದರು.
ಪಟ್ಟಣದಲ್ಲಿ ಗುರುವಾರ ವಿವಿಧ ಶಾಲಾ ಕಾಲೇಜುಗಳಲ್ಲಿನ ಶಿಕ್ಷಕರು, ಪದವೀಧರರನ್ನು ಭೇಟಿ ಮಾಡಿ ಮಾತನಾಡಿದ ಅವರು, ನಿರುದ್ಯೋಗ ಸಮಸ್ಯೆ ಪರಿಹರಿಸುತ್ತಾರೆ ಎಂದು ನಂಬಿದ್ದ ಪದವೀಧರರು ಇದೀಗ ನಿರಾಸೆ ಅನುಭವಿಸುತ್ತಿದ್ದಾರೆ. ನಾಲ್ಕು ಲಕ್ಷ ಹುದ್ದೆಗಳಲ್ಲಿ ಕನಿಷ್ಠ ಅರ್ಧದಷ್ಟಾದರೂ ತುಂಬಿದರೆ ನಿರುದ್ಯೋಗಿಗಳಿಗೆ ಅನುಕೂಲವಾಗುತ್ತದೆ ಎಂದರು.
ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, ಸಂಕನೂರ ಅವರು ಮೂರೂವರೆ ದಶಕಗಳಿಂದ ಶಿಕ್ಷಕರು, ಪದವೀಧರರು ಹಾಗೂ ಶೆಕ್ಷಣಿಕ ಕ್ಷೇತ್ರಗಳಲ್ಲಿ ಜವಾಬ್ದಾರಿಯುತ ಕಾರ್ಯ ನಿರ್ವಹಿಸಿದ್ದು, ಪದವೀಧರರು ಎದುರಿಸುತ್ತಿರುವ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿದ್ದಾರೆ ಎಂದರು.
ಗಂಗಾಧರ ಮೆಣಸಿನಕಾಯಿ, ಪ್ರಕಾಶ ಮಾದನೂರ, ಚಂದ್ರಶೇಖರ ಲಮಾಣಿ, ಸಂತೋಷ ರಾಥೋಡ, ಕಿರಣ ಹಿರೇಮಠ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net