Games ರಾಷ್ಟ್ರೀಯ ಕ್ರೀಡಾಕೂಟದಲ್ಲಿ ಗಂಗಮ್ಮ ಪ್ರಥಮ

games ಗಂಗಮ್ಮ ಸೋಮರೆಡ್ಡಿ.
games ಗಂಗಮ್ಮ ಸೋಮರೆಡ್ಡಿ.
Published on
ಲಕ್ಷ್ಮೇಶ್ವರ: ಪಟ್ಟಣದ ಬಿ.ಡಿ. ತಟ್ಟಿ ಅಣ್ಣಾವರು ಕಿವುಡ ಮಕ್ಕಳ ವಸತಿ (Games) ಶಾಲೆಯ ವಿದ್ಯಾರ್ಥಿನಿ ಗಂಗಮ್ಮ ಸೋಮರೆಡ್ಡಿ ಗುಜರಾತ್‌ನ ಅಹಮದಾಬಾದ್‌ನಲ್ಲಿ ಆಯೋಜಿಸಿದ್ದ 10ನೇ ರಾಷ್ಟ್ರೀಯ ಸಬ್ ಜ್ಯೂನಿಯರ್ ಮತ್ತು ಜ್ಯೂನಿಯರ್ ಅಥ್ಲೆಟಿಕ್ ಕ್ರೀಡಾಕೂಟದ 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದಿದ್ದಾಳೆ. ನವದೆಹಲಿಯ ಆಲ್ ಇಂಡಿಯಾ ಸ್ಪೋರ್ಟ್ಸ್ ಕೌನ್ಸಿಲ್ ಆಫ್ ದ ಡೆಫ್ ಆಶ್ರಯದಲ್ಲಿ ಮಾ. 20ರಿಂದ 23ರವರೆಗೆ ಕ್ರೀಡಾಕೂಟ ಆಯೋಜಿಸಲಾಗಿತ್ತು. ಶ್ರೇಷ್ಠ ಸಾಧನೆ ಮಾಡಿದ ಗಂಗಮ್ಮ ಶಾಲೆಯ ಮುಖ್ಯಸ್ಥರು ಹಾಗೂ ಆಡಳಿತ ಮಂಡಳಿ ಅಭಿನಂದಿಸಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net