

ಮಕ್ಕಳ ಸಂಖ್ಯೆ ಕುಸಿತದ ಕಾರಣಕ್ಕೆ ಮೂರ್ನಾಲ್ಕು ದಿನಗಳಿಂದ ಬೀಗ ಹಾಕಿದ್ದ ಪಟ್ಟಣದ ಕೆಂಚಲಾಪುರ ಬಡಾವಣೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಬಾಗಿಲು ಮಂಗಳವಾರ ಮತ್ತೆ (
school reopen)
ತೆರೆದಿದೆ.
ಶಾಲೆ ಬಂದ್ ಮಾಡುವ ಉದ್ದೇಶ ಶಿಕ್ಷಣ ಇಲಾಖೆಗೆ ಇಲ್ಲ. ಪಾಲಕರು ಆತಂಕಪಡಬೇಕಿಲ್ಲ. ಎರಡು ದಿನಗಳಲ್ಲಿ ಒಬ್ಬ ಪರಿಣಿತ ಶಿಕ್ಷಕರನ್ನು ಶಾಲೆಗೆ ನಿಯೋಜಿಸಲಾಗುವುದು. ಇಂದಿನಿಂದ ಶಾಲೆ ಎಂದಿನಂತೆ ಕಾರ್ಯನಿರ್ವಹಿಸಲಿದೆ. ಉಳಿದ ಮಕ್ಕಳನ್ನೂ ಮರಳಿ ಶಾಲೆಗೆ ಕರೆತರಲು ಕ್ರಮ ಕೈಗೊಳ್ಳಲಾಗುವುದು. ಪಾಲಕರು, ಎಸ್‌ಡಿಎಂಸಿ ಸದಸ್ಯರು ಹಾಗೂ ಸಾರ್ವಜನಿಕರನ್ನು ಕರೆದು ಸಭೆ ನಡೆಸಿ, ಶಾಲೆಯ ಅಭಿವೃದ್ಧಿಗೆ ಎಲ್ಲರ ಸಹಕಾರ ಪಡೆಯಲಾಗುವುದು.
ಶಿವರಾಜ ಸೀಮಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿ.