

ಹೂವಿನಶಿಗ್ಲಿ ಮಠದಲ್ಲಿ ಮಕರ ಸಂಕ್ರಾಂತಿ ಪುಣ್ಯಕಾಲದಲ್ಲಿ ಜರುಗುವ ಜಾತ್ರಾ ಮಹೋತ್ಸವ ನಿಮಿತ್ತ ನಡೆಯುವ ಖಟಕ್-ರೊಟ್ಟಿ, ಕರಿಂಡಿ, ಕಡಬು ಪ್ರಸಾದ ಮಾಡುವ ಸಂಪ್ರದಾಯವನ್ನು ಶ್ರೀಮಠದ ಲಿಂ.ನಿರಂಜನ ಮಹಾಸ್ವಾಮಿಗಳು ಹಾಕಿಕೊಟ್ಟಿದ್ದಾರೆ. 5 ದಶಕಗಳಿಂದ ಭಕ್ತರು ಮಠಕ್ಕೆ ರೊಟ್ಟಿ, ಧಾನ್ಯ ತಂದು ಕೊಡುತ್ತಿದ್ದರು. 2 ವರ್ಷದಿಂದ ನಾವೇ ಭಕ್ತರ ಮನೆಯತ್ತ ಹೋಗಿ ಬಂಡಿ ಮೂಲಕ ರೊಟ್ಟಿ ಸಂಗ್ರಹಿಸುವ ಕಾರ್ಯ ಮಾಡಿದ್ದೇವೆ. ಗ್ರಾಮದ ಭಕ್ತರು ಶ್ರೀಮಠದ ಶಕ್ತಿ ಮತ್ತು ಸಂಪತ್ತಾಗಿದ್ದು ಜಾತ್ರೆಯಷ್ಟೇ ಅಲ್ಲದೇ ವರ್ಷದುದ್ದಕ್ಕೂ ಗುರುಕುಲ ಮತ್ತು ಶಾಲೆಯ ಮಕ್ಕಳ ತ್ರಿವಿಧ ದಾಸೋಹ ಸೇವೆಗೆ ತನುಮನಧನದ ಸೇವೆ ಮಾಡುತ್ತ ಬಂದಿದ್ದಾರೆ. ಜಾತ್ರೆಯ 3 ದಿನಗಳ ಕಾಲ ನಾಡಿನ ಅನೇಕ ಹರಗುರುಚರ ಮೂರ್ತಿಗಳ ಸಾನ್ನಿಧ್ಯದಲ್ಲಿ ಅನೇಕ ಧಾರ್ಮಿಕ ಕಾರ್ಯಕ್ರಮಗಳು, ಸಾಮೂಹಿಕ ವಿವಾಹ ಮಹೋತ್ಸವ ಜರುಲಿವೆ. ಶ್ರೀ > ಚನ್ನವೀರ ಮಹಾಸ್ವಾಮಿಗಳು