ಶಾಸಕ ಡಾ. ಚಂದ್ರು ಲಮಾಣಿ ಸ್ಥಳಕ್ಕೆ ಆಗಮಿಸಿ ಘಟನೆಗೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಎಸ್‌ಪಿ ರೋಹನ್ ಜಗದೀಶ ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿ ಅವಲೋಕನ ಮಾಡಿ ಅಧಿಕಾರಿಗಳಿಗೆ ಸೂಕ್ತ ಸೂಚನೆಗಳನ್ನು ನೀಡಿದರು. ಡಿವೈಎಸ್‌ಪಿ ಮುರ್ತೂಜಾ ಖಾದ್ರಿ, ಡಿಆರ್‌ಡಿಎಸ್ಪಿ ವಿದ್ಯಾಧರ ನಾಯಕ್, ಸಿಪಿಐ ಬಿ.ವೈ. ನ್ಯಾಮಗೌಡ, ಪಿಎಸ್‌ಐ ನಾಗರಾಜ ಗಡದ, ಟಿ.ಕೆ. ರಾಥೋಡ ಪರಿಸ್ಥಿತಿಯನ್ನು ನಿಭಾಯಿಸಿದರು.