crop survey ರೈತರು ಬೆಳೆ ಸಮೀಕ್ಷೆ ಮಾಡಿಕೊಳ್ಳಲಿ

ಸ್ವಯಂ ಬೆಳೆ ದೃಢೀಕರಣ ಮಾಡಿಕೊಂಡು ಯೋಜನೆಗಳ ಸೌಲಭ್ಯ ಪಡೆಯುವಂತೆ ಲಕ್ಷ್ಮೇಶ್ವರ ತಾಲೂಕಿನ ರೈತರಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ ತಿಳಿವಳಿಕೆ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ಪ್ರಶಾಂತ ಕುಲಕರ್ಣಿ ಇದ್ದರು
ಸ್ವಯಂ ಬೆಳೆ ದೃಢೀಕರಣ ಮಾಡಿಕೊಂಡು ಯೋಜನೆಗಳ ಸೌಲಭ್ಯ ಪಡೆಯುವಂತೆ ಲಕ್ಷ್ಮೇಶ್ವರ ತಾಲೂಕಿನ ರೈತರಿಗೆ ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ ತಿಳಿವಳಿಕೆ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ಪ್ರಶಾಂತ ಕುಲಕರ್ಣಿ ಇದ್ದರು
Published on
ಲಕ್ಷ್ಮೇಶ್ವರ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಸ್ವಯಂಬೆಳೆ ದೃಢೀಕರಣ ಸಮೀಕ್ಷೆ (ಕ್ರಾಪ್ ಸರ್ವೇ) ಕಾರ್ಯ ಆರಂಭಗೊಂಡಿದ್ದು, ತಾಲೂಕಿನ ರೈತರು ಜಮೀನಿನಲ್ಲಿ ಬೆಳೆದಿರುವ ಬೆಳೆಗಳ ವಿವರವನ್ನು ಮೊಬೈಲ್ ಆ್ಯಪ್ ಮೂಲಕ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕು ಎಂದು ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಮನವಿ ಮಾಡಿದರು.
ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಶಿವಕುಮಾರ ಕಾಶಪ್ಪನವರ ಮಾತನಾಡಿ, ಬೆಳೆ ಸಮೀಕ್ಷೆಯಲ್ಲಿ ದಾಖಲಾಗುವ ಮಾಹಿತಿಯೇ ಬೆಳೆ ವಿಮೆ, ಬೆಳೆ ನಷ್ಟ ಪರಿಹಾರ, ಬೆಂಬಲ ಬೆಲೆ, ಕೃಷಿ ಸಾಲ, ಇನ್‌ಪುಟ್ ಸಬ್ಸಿಡಿ ಸೇರಿದಂತೆ ಸರ್ಕಾರದ ವಿವಿಧ ರೈತಪರ ಯೋಜನೆಗಳ ಅನುಷ್ಠಾನಕ್ಕೆ ಆಧಾರವಾಗುತ್ತದೆ. ಆದ್ದರಿಂದ ರೈತರು ನಿಗದಿತ ಅವಧಿಯೊಳಗೆ ತಮ್ಮ ಜಮೀನಿನ ಬೆಳೆ ವಿವರವನ್ನು ಸ್ವಯಂ ದಾಖಲಿಸಬೇಕು. ಸ್ವತಃ ರೈತರೇ ಬೆಳೆ ದೃಢೀಕರಣವನ್ನು ಜಮೀನಿನಲ್ಲಿ ಬೆಳೆ ಇರುವಾಗಲೇ ಮಾಡಿಕೊಳ್ಳಬೇಕು ಎಂದರು.
ತೋಟಗಾರಿಕೆ ಇಲಾಖೆ ಸಹಾಯಕ ಪ್ರಶಾಂತ ಕುಲಕರ್ಣಿ ಮಾತನಾಡಿ, ತೋಟಗಾರಿಕೆ ಬೆಳೆಗಳನ್ನು ಬೆಳೆಯುತ್ತಿರುವ ರೈತರು ತಮ್ಮ ಬೆಳೆಗಳ ವಿವರವನ್ನು ಬೆಳೆ ಸಮೀಕ್ಷೆ ಆ್ಯಪ್‌ನಲ್ಲಿ ದಾಖಲಿಸಬೇಕು. ಈ ಮಾಹಿತಿಯು ಇಲಾಖೆಯ ವಿವಿಧ ಸಹಾಯಧನ ಹಾಗೂ ಫಲಾನುಭವಿ ಯೋಜನೆಗಳ ಅನುಷ್ಠಾನಕ್ಕೆ ನೆರವಾಗಲಿದೆ ಎಂದರು.
ಗ್ರಾಮ ಮಟ್ಟದಲ್ಲಿ ರೈತ ಸಂಪರ್ಕ ಕೇಂದ್ರಗಳ ಸಿಬ್ಬಂದಿ, ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ರೈತರಿಗೆ ಮಾರ್ಗದರ್ಶನ ನೀಡುತ್ತಿದ್ದು, ಮೊಬೈಲ್ ಬಳಕೆಯಲ್ಲಿ ತೊಂದರೆ ಇರುವ ರೈತರು ತಮ್ಮ ಹತ್ತಿರದ ರೈತ ಸಂಪರ್ಕ ಕೇಂದ್ರ, ಸಂಬಂಧಿತ ಅಧಿಕಾರಿಗಳು ಅಥವಾ ಪಿಆರ್‌ಒಗಳ ನೆರವು ಪಡೆದು ಬೆಳೆ ಸಮೀಕ್ಷೆ ಪೂರ್ಣಗೊಳಿಸಬಹುದು.
ರೈತರಾದ ವಿರೂಪಾಕ್ಷ ಆದಿ, ಸೋಮಪ್ಪ ಮುಳಗುಂದ, ಮುದಕಪ್ಪ ಅಣ್ಣಿಗೇರಿ, ಮಂಜುನಾಥ ಮರಾಠೆ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net