CHILDREN ಮಕ್ಕಳಿಗೆ ಉತ್ತಮ ಸಂಸ್ಕಾರ ಕಲಿಸಲಿ

children ಗಜೇಂದ್ರಗಡದ ಶ್ರೀ ಜಗದಂಬಾ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚರಣೆಯನ್ನು  ಡಾ. ಮಲ್ಲಿಕಾರ್ಜುನ ಸುಂಕದ ಉದ್ಘಾಟಿಸಿದರು. ಪ್ರಭು ಚವಡಿ, ಮಹಾಬಲೇಶ್ವರ ಪಟಗಾರ, ಮಂಜುನಾಥ ಬಡಿಗೇರ, ರೂಪಾ ಪವಾರ, ಹಾಲೇಶ, ಇತರರಿದ್ದರು.

Published on
ಗಜೇಂದ್ರಗಡ: ಪ್ರತಿ ಕುಟುಂಬವು ತಂಬಾಕು ಉತ್ಪನ್ನಗಳ (children ) ಸೇವನೆಯಿಂದ ಮುಕ್ತವಾಗಿರಬೇಕು. ತಂದೆ- ತಾಯಿ ಮಕ್ಕಳಿಗೆ ಉತ್ತಮ ಸಂಸ್ಕಾರವುಳ್ಳ ಜೀವನಶೈಲಿ ಕಲಿಸಬೇಕು ಎಂದು ವೈದ್ಯಾಧಿಕಾರಿ ಡಾ.ಮಲ್ಲಿಕಾರ್ಜುನ ಸುಂಕದ ಹೇಳಿದರು.
ಪಟ್ಟಣದ ಶ್ರೀ ಜಗದಂಬಾ ದೇವಸ್ಥಾನದ ಸಭಾಭವನದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮತ್ತು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯಿಂದ ಹಮ್ಮಿಕೊಂಡಿದ್ದ ವಿಶ್ವ ತಂಬಾಕು ವಿರೋಧಿ ದಿನಾಚಾರಣೆ ಉದ್ಘಾಟಿಸಿ ಅವರು ಮಾತನಾಡಿದರು. ಪುರಸಭೆ ಮಾಜಿ ಸದಸ್ಯ ಪ್ರಭು ಚವಡಿ ಮಾತನಾಡಿ, ತಂಬಾಕು ಸೇವನೆ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟು ಮಾಡುತ್ತದೆ. ಯುವಜನತೆ ತಂಬಾಕು ಉತ್ಪನ್ನಗಳಿಂದ ದೂರ ಇರಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ತಾಲೂಕು ಯೋಜನಾಧಿಕಾರಿ ಮಹಾಬಲೇಶ್ವರ ಪಟಗಾರ ಮಾತನಾಡಿದರು. ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಮಂಜುನಾಥ ಬಡಿಗೇರ, ಒಕ್ಕೂಟದ ಅಧ್ಯಕ್ಷೆ ರೂಪಾ ಪವಾರ, ಸೇವಾ ಪ್ರತಿನಿಧಿಗಳು ಹಾಗೂ ಸ್ವ ಸಹಾಯ ಸಂಘದ ಸದಸ್ಯರು ಇದ್ದರು. ವಲಯದ ಮೇಲ್ವಿಚಾರಕ ಹಾಲೇಶ ನಿರ್ವಹಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net