MAHADAYI ಜಲಸಂಪನ್ಮೂಲ ಸಚಿವರ ಭೇಟಿಯಾದ ರೈತರ ನಿಯೋಗ

MAHADAYI : ಮಹದಾಯಿ ಹೋರಾಟಗಾರರ ನಿಯೋಗ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
MAHADAYI : ಮಹದಾಯಿ ಹೋರಾಟಗಾರರ ನಿಯೋಗ ಬೆಂಗಳೂರಿನಲ್ಲಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.
Published on
ನರಗುಂದ: ರೈತ ಸೇನಾ ಕರ್ನಾಟಕ ಹೋರಾಟ ರಾಜ್ಯ (MAHADAYI) ಸಮಿತಿ ಮುಖಂಡರು ಹಾಗೂ ಪದಾಧಿಕಾರಿಗಳು ಬೆಂಗಳೂರಿಗೆ ತೆರಳಿ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮಹದಾಯಿ ಯೋಜನೆ ತ್ವರಿತವಾಗಿ ಅನುಷ್ಠಾನಗೊಳಿಸಲು ಮನವಿ ಮಾಡಿದ್ದಾರೆ. ಈ ಬೇಡಿಕೆಯ ಜತೆಗೆ ತಾಲೂಕಿನ ವಾಸನ ಬಳಿ ಬ್ರಿಜ್ ಕಂ ಬ್ಯಾರೇಜ್ ನಿರ್ಮಾಣ, ಲಕನಾಯಕನಕೊಪ್ಪದ ನೀರಾವರಿ ಕಾಲುವೆ ದುರಸ್ತಿ ಕಾಮಗಾರಿ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಈ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ರೈತ ಮುಖಂಡರ ಸಭೆ ಕರೆದು ಚರ್ಚಿಸಬೇಕೆಂದು ಮನವಿ ಮಾಡಿದ್ದಾರೆ. ರೈತ ಸೇನಾ ಕರ್ನಾಟಕ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ವೀರೇಶಸ್ವಾಮಿ ಸೊಬರದಮಠ, ಗುರು ರಾಯನಗೌಡ್ರ, ಮಲ್ಲಣ್ಣ ಅಲೇಕಾರ, ಶಿವಪ್ಪ ಹೊರಕೇರಿ, ವೆಂಕನಗೌಡ ಗಡ್ಡೆನ್ನವರ, ಅಶೋಕ ಸಾತನ್ನವರ, ಹೇಮಕ್ಕ ಗಾಳಿ, ಜಂಬಣ್ಣ ಅನುವಾಲ, ಸಿದ್ದಪ್ಪ ತುರಮರಿ, ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net