ಸಾಮೂಹಿಕ ವಿವಾಹದಿಂದ ದುಂದು ವೆಚ್ಚಕ್ಕೆ ಕಡಿವಾಣ

ಗಜೇಂದ್ರಗಡ ತಾಲೂಕಿನ ಸುಕ್ಷೇತ್ರ ಇಟಗಿ ಭೀಮಾಂಬಿಕಾ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 28ನೇ ವರ್ಷದ ಸಾಮೂಹಿಕ ವಿವಾಹ, ಧರ್ಮಸಭೆ ಕಾರ್ಯಕ್ರಮ ನಡೆಯಿತು. ಶಾಸಕ ಜಿ.ಎಸ್. ಪಾಟೀಲ, ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮೀಜಿ, ಶ್ರೀ ಅಭಿನವ ಚನ್ನಬಸವ ಮಹಾಸ್ವಾಮೀಜಿ, ಇಟಗಿ ಧರ್ಮರ ಮಠದ ಸ್ವಾಮೀಜಿ, ವೀರಣ್ಣ ಶೆಟ್ಟರ, ಪ್ರಭು ಮೇಟಿ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಶಾಸಕ ಜಿ.ಎಸ್. ಪಾಟೀಲ ಅಭಿಪ್ರಾಯ
  • ಶಿವಾನುಭವಗೋಷ್ಠಿ, ಧರ್ಮ ಸಭೆ ಉದ್ಘಾಟನೆ
ಗಜೇಂದ್ರಗಡ: ಸಾಮೂಹಿಕ ವಿವಾಹಗಳಿಂದ ಸಮಾಜದಲ್ಲಿ ಸಾಮರಸ್ಯ ಮೂಡುತ್ತದೆ. ಜತೆಗೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಅನುಕೂಲವಾಗುತ್ತದೆ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ತಾಲೂಕಿನ ಸುಕ್ಷೇತ್ರ ಇಟಗಿ ಭೀಮಾಂಬಿಕಾ ಸಮುದಾಯ ಭವನದಲ್ಲಿ ಭಾನುವಾರ ಹಮ್ಮಿಕೊಂಡಿದ್ದ 28ನೇ ವರ್ಷದ ಸಾಮೂಹಿಕ ವಿವಾಹ ಹಾಗೂ 516ನೇ ಶಿವಾನುಭವ ಗೋಷ್ಠಿ ಮತ್ತು ಧರ್ಮಸಭೆ ಉದ್ಘಾಟಿಸಿ ಅವರು ಮಾತನಾಡಿದರು. ನಮ್ಮ ಧರ್ಮ ಮತ್ತು ಸಂಸ್ಕೃತಿ ಅರ್ಥದ ಮೇಲೆ ಜೀವನ ನಡೆಸಬೇಕು. ಇದು ನಮ್ಮ ಬದುಕಾಗಬೇಕು. ದುಂದುವೆಚ್ಚಕ್ಕೆ ಕಡಿವಾಣ ಹಾಕಿ, ಸರಳವಾಗಿ ವಿವಾಹ ಕಾರ್ಯಕ್ರಮಗಳು ನೆರವೇರಬೇಕು. ಸತಿ-ಪತಿಗಳು ಹೇಗಿರಬೇಕು ಎಂದರೆ ಜಗ ಮೆಚ್ಚುವ ಹಾಗಿರಬೇಕು ಎಂದು ಸಲಹೆ ನೀಡಿದರು.
ಹಾಲಕೆರೆ ಅನ್ನದಾನೇಶ್ವರ ಮಠದ ಶ್ರೀ ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಸಂಸಾರಬದ್ಧ ಮದುವೆಗಳು ಸಾಮೂಹಿಕ ವಿವಾಹಗಳಲ್ಲಿ ಸಾಧ್ಯವಿದ್ದು, ಹರಗುರು ಚರಮೂರ್ತಿಗಳ ಆಶೀರ್ವಾದ ಸಿಗುತ್ತದೆ. ದುಂದುವೆಚ್ಚ ಎಂದರೆ ದುರಾಚಾರ. ಅದಕ್ಕೆ ಕಡಿವಾಣ ಹಾಕಲು ಸಾಮೂಹಿಕ ವಿವಾಹಗಳು ನೆರವಾಗುತ್ತವೆ. ಮದುವೆ ಮಾಡಿಕೊಂಡು ಸಾಲ ಮಾಡಿಕೊಳ್ಳುವವರೇ ಹೆಚ್ಚಾಗಿರುವ ಇಂದಿನ ಕಾಲದಲ್ಲಿ ದುಂದುವೆಚ್ಚವಿಲ್ಲದೇ ಸಾಮೂಹಿಕ ವಿವಾಹ ಕಾರ್ಯಕ್ರಮಗಳು ನಡೆಯಬೇಕು ಎಂದರು.
ನಿಡಗುಂದಿಕೊಪ್ಪ ಶ್ರೀ ಶಾಖಾ ಶಿವಯೋಗಮಂದಿರದ ಶ್ರೀ ಅಭಿನವ ಚನ್ನಬಸವ ಮಹಾಸ್ವಾಮಿಗಳು, ಇಟಗಿ ಧರ್ಮರ ಮಠದ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ರೋಣ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವೀರಣ್ಣ ಶೆಟ್ಟರ, ತಾಪಂ ಮಾಜಿ ಸದಸ್ಯ ಪ್ರಭು ಮೇಟಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net