ಶಾಸಕನ ಬಂಧನ-ಸಿಡಿದೆದ್ದ ಕಾರ್ಯಕರ್ತರು

ಲಕ್ಷ್ಮೇಶ್ವರದಲ್ಲಿ ಡಾ. ಚಂದ್ರು ಲಮಾಣಿ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಲಕ್ಷ್ಮೇಶ್ವರದಲ್ಲಿ ಡಾ. ಚಂದ್ರು ಲಮಾಣಿ ಅಭಿಮಾನಿಗಳ ಬಳಗದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
Published on
ಲಕ್ಷ್ಮೇಶ್ವರ: ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಅವರನ್ನು ಕಾಂಗ್ರೆಸ್ ಪಕ್ಷದವರು ಕುತಂತ್ರದಿಂದ ಲೋಕಾ ಬಲೆಗೆ ಸಿಕ್ಕಿಸಿ ಮೋಸ ಮಾಡಿದ್ದಾರೆ ಎಂದು ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗ ಹಾಗೂ ಬಂಜಾರ ಸಮಾಜದಿಂದ ಪಟ್ಟಣದಲ್ಲಿ ಬುಧವಾರ ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಶ್ರೀಸೋಮೇಶ್ವರ ತೆರಿನ ಮನೆ ಆವರಣದಲ್ಲಿ ಪಟ್ಟಣ, ಶಿರಹಟ್ಟಿ, ಮುಂಡರಗಿ ಭಾಗದಿಂದ ಸಾವಿರಾರು ಅಭಿಮಾನಿಗಳು ಜಮಾಯಿಸಿದ್ದರು. 
ಪ್ರತಿಭಟನಾ ಮೆರವಣಿಗೆಯುದ್ದಕ್ಕೂ ‘ಶಾಸಕರೇ ನಾವು ನಿಮ್ಮೊಂದಿಗಿದ್ದೇವೆ. ಯಾವುದೇ ಕಾರಣಕ್ಕೂ ಅಳುಕಬೇಡಿ, ನಿಮ್ಮ ಏಳಿಗೆ ಸಹಿಸದವರು ಕುತಂತ್ರದಿಂದ ಇಂತಹ ಹೇಯ ಕೃತ್ಯಕ್ಕೆ ಇಳಿಯುವ ಕಾರ್ಯ ಮಾಡಿದ್ದಾರೆ’ ಎಂದು ಘೋಷಣೆ ಕೂಗಿದರು. ‘ನಮ್ಮ ಶಾಸಕ ನಮ್ಮ ಹೆಮ್ಮೆ, ಅನ್ನದಾತ ಶಾಸಕ, ಜನಪರ ಕಾಳಜಿ ಶಾಸಕ, ಪ್ರಾಮಾಣಿಕ ಸೇವಕ ಶಾಸಕ, ನಿಮ್ಮೊಂದಿಗೆ ನಾವಿದ್ದೇವೆ’ ಎಂಬಿತ್ಯಾದಿ ಭಿತ್ತಿ ಪತ್ರಗಳನ್ನು ಜನ ಮೆರವಣಿಗೆಯಲ್ಲಿ ಪ್ರದರ್ಶಿಸಿದರು.
ಪ್ರತಿಭಟನಾ ಮೆರವಣಿಗೆಯು ಕಾಶೆಟ್ಟಿಯವರ ಓಣಿ, ಪೇಟೆ ರಸ್ತೆ, ಪುರಸಭೆ ಶಿಗ್ಲಿ ನಾಕಾ ಮೂಲಕ ಹೊಸ ಬಸ್ ನಿಲ್ದಾಣದಲ್ಲಿ 1 ಗಂಟೆಗೂ ಅಧಿಕ ಕಾಲ ರಸ್ತೆಯಲ್ಲಿ ಕುಳಿತು ಘಟನೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. 
ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಹಿರಿಯ ಸದಸ್ಯ ಸುನೀಲ ಮಹಾಂತಶೆಟ್ಟರ, ಶಂಕರ ಮರಾಠೆ, ಅಶೋಕ ಶಿರಹಟ್ಟಿ, ತಿಮ್ಮರಡ್ಡಿ ಮರಡ್ಡಿ, ಕುಮಾರಸ್ವಾಮಿ ಹಿರೇಮಠ, ನವೀನ ಹಿರೇಮಠ, ನಾಗರಾಜ ಲಕ್ಕುಂಡಿ, ಲಿಂಗರಾಜ ಪಾಟೀಲ, ಶಿವಣ್ಣ ಲಮಾಣಿ  ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಅವರ ಪತ್ನಿ ಮುಡಾ ಹಗರಣದಲ್ಲಿ ಹದಿನಾಲ್ಕು ಸೈಟ್ ಪಡೆದು ಪ್ರಕರಣ ದಾಖಲಾಗುತ್ತಿದ್ದಂತೆಯೇ 14 ಸೈಟ್ ವಾಪಸು ಕೊಟ್ಟಾಗ ಅವರ ರಾಜೀನಾಮೆ ಕೇಳಿದೀರಾ? ಅಬಕಾರಿ ಹಗರಣದಲ್ಲಿ ಆರ್.ಬಿ.ತಿಮ್ಮಾಪೂರವರು ರಾಜೀನಾಮೆ ನೀಡಿದ್ದಾರಾ ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಪಕ್ಷದವರು ನೈತಿಕತೆಯ ಬಗ್ಗೆ ಮಾತನಾಡುವುದು ಶೋಭೆ ತರುವುದಿಲ್ಲ. ಈ ಭಾಗದಲ್ಲಿ ಒಳ್ಳೆಯ ಹೆಸರು ಮಾಡುತ್ತಿದ್ದ ಯುವಕ ಬೆಳೆಯುತ್ತಿರುವುದನ್ನು ಕಂಡು ಹೇಯ ಕೃತ್ಯಕ್ಕೆ ಮುಂದಾಗಿದ್ದಾರೆ. ಇದರಲ್ಲಿ ಬಂಜಾರ ಸಮಾಜವನ್ನು ತುಳಿಯುವ ಕಾರ್ಯವನ್ನೂ ಕಾಂಗ್ರೆಸ್ ಮಾಡುತ್ತಿದೆ’  ಎಂದು ಆರೊಪಿಸಿದರು. 
ಷಡ್ಯಂತ್ರದ ಮೂಲಕ ದಲಿತ ಶಾಸಕರನ್ನು ಬಂಧಿಸಿ ಮಟ್ಟ ಹಾಕುವ ಹುನ್ನಾರವನ್ನು ಕಾರ್ಯಕರ್ತರು ಸಹಿಸುವುದಿಲ್ಲ. ಗೊಡ್ಡು ಬೇದರಿಕೆಗಳಿಗೆ ಹೆದರುವುದಿಲ್ಲ ಎಂದು ಹರಿಹಾಯ್ದರು. 
ಪ್ರತಿಭಟನಾ ಮೆರವಣಿಗೆಯಲ್ಲಿ ಡಾ. ಭೀಮಸಿಂಗ ರಾಠೋಡ, ಆನಂದಗೌಡ ಪಾಟೀಲ, ಎಂ.ಎಸ್. ದೊಡ್ಡಗೌಡರ, ಶಿವಪ್ರಕಾಶ ಮಹಾಜನಶೆಟ್ಟರ, ಡಿ.ವೈ. ಹುನಗುಂದ, ಟೋಪಣ್ಣ ಲಮಾಣಿ, ಥಾವರಪ್ಪ ಲಮಾಣಿ, ಕರಬಸಪ್ಪ ಹಂಚಿನಾಳ, ಶಿವಯೋಗಿ ಅಂಕಲಕೋಟಿ, ಫಕೀರೇಶ ರಟ್ಟಿಹಳ್ಳಿ, ಪೂರ್ಣಾಜಿ ಖರಾಟೆ, ವಿಜಯ ಮೆಕ್ಕಿ, ರಮೇಶ ಧನದಮನಿ, ದೇವಪ್ಪ ಮತ್ತೂರ, ಬಸವರಾಜ ಗಾಣಗೇರ, ಈರಣ್ಣ ಪೂಜಾರ, ಜಾನು ಲಮಾಣಿ, ಸಂತೋಷ ಲಮಾಣಿ, ಗಿರೀಶ ಚೌರಡ್ಡಿ, ಮಲ್ಲೇಶಪ್ಪ ಲಮಾಣಿ, ಅಶೋಕ ಬಟಕುರ್ಕಿ, ನಿಂಗಪ್ಪ ಪ್ಯಾಟಿ, ಭೀಮಣ್ಣ ಯಂಗಾಡಿ, ಶಿವಾನಂದ ಮೆಕ್ಕಿ, ಕಲ್ಲಪ್ಪ ಹಡಪದ, ನಂದಾ ಪಲ್ಲೇದ, ಜ್ಯೋತಿ ಹಾನಗಲ್, ಅಶ್ವಿನಿ ಅಂಕಲಕೋಟಿ, ಪೂರ್ಣಿಮಾ ಪಾಟೀಲ್, ವಾಣಿ ಹತ್ತಿ, ಮಂಜುಳಾ ಗುಂಜಳ, ಮೋಹನ ಗುತ್ತೆಮ್ಮನವರ, ಶಿವಣಗೌಡರ ಕಂಟಿಗೌಡರ, ಶಂಕರ ಬಾವಿ, ಮಹೇಶ ಬಡ್ನಿ, ತಿಪ್ಪಣ್ಣ ಕೊಂಚಿಗೇರಿ, ಬಸವರಾಜ ಇಟಗಿ, ರಾಜು ಅಂದಲಗಿ ಇತರರು ಪಾಲ್ಗೊಂಡಿದ್ದರು. ಆದರೆ, ಈ ಬೃಹತ್ ಪ್ರತಿಭಟನೆಯಲ್ಲಿ ಎಲ್ಲಿಯೂ... ಯಾರೊಬ್ಬರೂ ಬಿಜೆಪಿ ಬಾವುಟ, ಶಾಲು, ಚಿಹ್ನೆ ಬಳಸಿರಲಿಲ್ಲ..!   
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net