ಸರ್ಕಾರಿ ಆಸ್ಪತ್ರೆಗಳಿಗೆ ಸಮರ್ಪಕ ಔಷಧ (MEDICINE) ಪೂರೈಸಿ

medicine ಮುಂಡರಗಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಸೋಮವಾರ ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಲಾಯಿತು. ಡಾ. ಲಕ್ಷ್ಮಣ ಪೂಜಾರ, ಡಾ. ಸಂತೋಷ ಪಾಟೀಲ, ಮಲ್ಲಿಕಾರ್ಜುನ ಕಲಕಂಬಿ ಇತರರಿದ್ದರು.
medicine ಮುಂಡರಗಿಯಲ್ಲಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಸೋಮವಾರ ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಲಾಯಿತು. ಡಾ. ಲಕ್ಷ್ಮಣ ಪೂಜಾರ, ಡಾ. ಸಂತೋಷ ಪಾಟೀಲ, ಮಲ್ಲಿಕಾರ್ಜುನ ಕಲಕಂಬಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • * ವೈದ್ಯಾಧಿಕಾರಿಗಳ ಸಂಘದಿಂದ ತಹಸೀಲ್ದಾರ್‌ಗೆ ಮನವಿ
  • 11ರಿಂದ ಮೊದಲ ಹಂತ, 16ರಿಂದ 2ನೇ ಹಂತದಲ್ಲಿ ಧರಣಿ
ಮುಂಡರಗಿ: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಕಾಲಕಾಲಕ್ಕೆ ಸಮರ್ಪಕವಾಗಿ ಇಲಾಖೆಯಿಂದ ಔಷಧಗಳನ್ನು ಸರಬರಾಜು ಮಾಡುವುದು ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ತಾಲೂಕು ಸರ್ಕಾರಿ ವೈದ್ಯಾಧಿಕಾರಿಗಳ ಸಂಘ, ರಾಜ್ಯ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ನೌಕರರ ಸಂಘ, ಇಲಾಖೆ ಎಲ್ಲ ವೃಂದ ಸಂಘಗಳ ಸಹಯೋಗದಲ್ಲಿ ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಅವರಿಗೆ ಸೋಮವಾರ ಮನವಿ ಸಲ್ಲಿಸಲಾಯಿತು.
ತಾಲೂಕು ಸರ್ಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಲಕ್ಷ್ಮಣ ಪೂಜಾರ ಮಾತನಾಡಿ, ವೃಂದ ಮತ್ತು ನೇಮಕಾತಿ ನಿಯಮಗಳನ್ನು ಪ್ರತಿ 3 ವರ್ಷಕ್ಕೊಮ್ಮೆ ತಿದ್ದುಪಡಿ ಮಾಡಲು ಸರ್ಕಾರಿ ಆದೇಶವಿದೆ. ಆದರೂ ಇದನ್ನು ಉಲ್ಲಂಘಿಸಿ 1973ರಿಂದ ಇಲ್ಲಿಯವರೆಗೆ ಇಲಾಖೆಯ ವೃಂದ ಮತ್ತು ನೇಮಕಾತಿ ನಿಯಮಗಳನ್ನು ತಿದ್ದುಪಡಿ ಮಾಡಿಲ್ಲ. ಶೀಘ್ರ ತಿದ್ದುಪಡಿ ಮಾಡಬೇಕು. ಇಲಾಖೆ ಎಲ್ಲ ವೃಂದಗಳ ಜೇಷ್ಠತಾ ಪಟ್ಟಿಯನ್ನು ಕಾಲಕಾಲಕ್ಕೆ ಪ್ರಕಟಿಸಬೇಕು. ವೃಂದದ ಯಾವುದೇ ಅಧಿಕಾರಿ ನೌಕರರಿಗೆ 5 ವರ್ಷಗಳಿಂದ ಮುಂಬಡ್ತಿ ನೀಡಿಲ್ಲ. ಕೂಡಲೇ ಮುಂಬಡ್ತಿಗಳನ್ನು ನೀಡಬೇಕು. ಇನ್ನಿತರ ಪ್ರಮುಖ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು ಎಂದು ಒತ್ತಾಯಿಸಿದರು.
ಮಾ. 11ರಿಂದ 15ರವರೆಗೆ ಮೊದಲ ಹಂತದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆ, ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಡಿಸ್ಪೆನ್ಸರಿಗಳಲ್ಲಿನ ಎಲ್ಲ ವೃಂದದ ವೈದ್ಯರು, ಅಧಿಕಾರಿ-ನೌಕರರು ಕಪ್ಪುಪಟ್ಟಿ ಧರಿಸಿ ಹೊರ ರೋಗಿಗಳ ಚಿಕಿತ್ಸೆ ಸ್ಥಗಿತಗೊಳಿಸಿ, ತುರ್ತು ಸೇವೆ ಮಾತ್ರ ನಿರ್ವಹಿಸುವ ಮೂಲಕ ಮುಷ್ಕರದಲ್ಲಿ ಪಾಲ್ಗೊಳ್ಳುವರು. ಮಾ. 16ರಿಂದ ಎರಡನೇ ಹಂತದಲ್ಲಿ ಬೇಡಿಕೆ ಈಡೇರುವವರೆಗೂ ಆರೋಗ್ಯ ಇಲಾಖೆಯ ವೈದ್ಯರು, ಅಧಿಕಾರಿಗಳು, ನೌಕರರು ಕರ್ತವ್ಯಕ್ಕೆ ಅನಿರ್ಧಿಷ್ಟಾವಧಿವರೆಗೆ ಗೈರಾಗಿ ಮುಷ್ಕರ ನಡೆಸಲಾಗುವುದು ಎಂದರು.
ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾಗರಾಜ ಹಳ್ಳಿಕೇರಿ ಮಾತನಾಡಿ, ಸರ್ಕಾರಿ ವೈದ್ಯಾಧಿಕಾರಿಗಳ ಸಂಘದಿಂದ ಕೈಗೊಳ್ಳುವ ಮುಷ್ಕರಕ್ಕೆ ನಮ್ಮ ಬೆಂಬಲ ಇದೆ. ಸರ್ಕಾರ ನೌಕರರ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂತೋಷ ಪಾಟೀಲ, ಆರೋಗ್ಯ ಇಲಾಖೆ ವೃಂದ ಸಂಘಗಳ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಕಲಕಂಬಿ, ಡಾ. ಜಹಾಂಗೀರ ಹಾರೋಗೇರಿ, ಡಾ. ಐಶ್ವರ್ಯಾ, ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನರ, ಶಂಕರ ಸರ್ವದೆ, ಕೆ.ವಿ. ಬಡಿಗೇರ, ಆರೋಗ್ಯ ನೌಕರರು, ಸಿಬ್ಬಂದಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net