ಗಜೇಂದ್ರಗಡ: ಕನಸು ಸೇವಾ ಫೌಂಡೇಷನ್(ರಿ) ವತಿಯಿಂದ ನಗರದ ಜಗಜೀವನರಾಮ್ (PLATFORMS) ಸಮಾಜ ಭವನದಲ್ಲಿ ಭಾನುವಾರ ಕನಸಿನ ಸಂಭ್ರಮ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮೈಸೂರು ಮಠದ ಶ್ರೀ ಮ.ನಿ.ಪ್ರ. ಜಗದ್ಗುರು ವಿಜಯಮಹಾಂತ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿ ಮಕ್ಕಳಲ್ಲಿ, ಮಹಿಳೆಯರಲ್ಲಿ ಅಡಗಿರುವ ಪ್ರತಿಭೆ ಗುರುತಿಸಿ ಬೆಳೆಸುವಂತಹ ಕಾರ್ಯಕ್ರಮಗಳು ಸಮಾಜಕ್ಕೆ ಮಾದರಿಯಾಗಲಿವೆ. ಶಿಕ್ಷಣದ ಜತೆಗೆ ಸಂಸ್ಕಾರ ಮತ್ತು ಕಲೆಯ ಬೆಳವಣಿಗೆಯೂ ಅಗತ್ಯವಾಗಿದೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ಕಾರ್ಯದರ್ಶಿ ವಿ.ಬಿ. ಸೊಮನಕಟ್ಟಿಮಠ ಮಾತನಾಡಿ, ಮಹಿಳೆಯರ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸುವಲ್ಲಿ ಕಾರ್ಯ ಮಾಡಲಾಗುತ್ತಿದೆ. ಇಂತಹ ಕಾರ್ಯಕ್ರಮಗಳು ಮಕ್ಕಳಲ್ಲಿ ಆತ್ಮವಿಶ್ವಾಸ, ಸ್ಪರ್ಧಾತ್ಮಕ ಮನೋಭಾವ ಹಾಗೂ ಸೃಜನಶೀಲತೆ ಬೆಳೆಸಲು ಸಹಕಾರಿ ಎಂದರು. ಲಕ್ಷ್ಮೀ ಕರ್ಲಿ ಉಪನ್ಯಾಸ ನೀಡಿ, ಮಕ್ಕಳು ಕೇವಲ ಪಠ್ಯ ಶಿಕ್ಷಣಕ್ಕೆ ಸೀಮಿತವಾಗದೆ ಸಂಗೀತ, ನೃತ್ಯ, ಚಿತ್ರಕಲೆ, ಭಾಷಣ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ತಮ್ಮ ಪ್ರತಿಭೆ ಬೆಳೆಸಿಕೊಳ್ಳಬೇಕು. ಪಾಲಕರು ಮಕ್ಕಳ ಆಸಕ್ತಿ, ಗುರುತಿಸಿ ಪ್ರೋತ್ಸಾಹಿಸಿದರೆ ಅವರು ಭವಿಷ್ಯದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದರು.