COMMONWEATLTH: ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನಕ್ಕೆ ಸಿದ್ಧತೆ

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ, ಪರಿಷತ್ ಸಭಾಪತಿ ಸಲೀಂ ಅಹ್ಮದ್ ಸನ್ಮಾನಿಸಿದರು.
ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರನ್ನು ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ, ಪರಿಷತ್ ಸಭಾಪತಿ ಸಲೀಂ ಅಹ್ಮದ್ ಸನ್ಮಾನಿಸಿದರು.
Published on
ರೋಣ: ದಕ್ಷಿಣ ಆಫ್ರಿಕಾದ ಕೇಪ್‌ಟೌನ್‌ನಲ್ಲಿ ಸೆ.13ರಿಂದ 19ರವರೆಗೆ ಆಯೋಜಿಸಲಾಗಿರುವ 69ನೇ ಕಾಮನ್‌ವೆಲ್ತ್ (COMMONWEALTH) ಸಂಸದೀಯ ಸಮ್ಮೇಳನದ (ಸಿಪಿಸಿ) ಹಿನ್ನೆಲೆಯಲಿ ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಜಿ.ಎಸ್. ಪಾಟೀಲ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರೊಂದಿಗೆ ಮಂಗಳವಾರ ಮಹತ್ವದ ಸಮಾಲೋಚನೆ ನಡೆಸಿದರು.
ನವದೆಹಲಿಯ ಸಂಸತ್ ಭವನದ ಆನೆಕ್ಸ್ ಮುಖ್ಯ ಸಮಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ, ಮುಂಬರುವ ಸಮ್ಮೇಳನದ ಸಿದ್ಧತೆಗಳು, ಸಂಸದೀಯ ವ್ಯವಹಾರಗಳು ಹಾಗೂ ಶಾಸನ ಸಭೆಗಳ ಕಾರ್ಯವೈಖರಿ ಕುರಿತು ವಿಸ್ತೃತ ಚರ್ಚೆ ನಡೆಯಿತು.

ಪ್ರಜಾಪ್ರಭುತ್ವ ಮೌಲ್ಯಗಳ ಬಲವರ್ಧನೆಗೆ ಒತ್ತು

ಸಮ್ಮೇಳನದಲ್ಲಿ ಕರ್ನಾಟಕದ ನಿಯೋಗವನ್ನು ಮುನ್ನಡೆಸಲಿರುವ ಜಿ.ಎಸ್. ಪಾಟೀಲ ಅವರು, ಅಂತಾರಾಷ್ಟ್ರೀಯ ವೇದಿಕೆಯಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ, ಸಂಸದೀಯ ವ್ಯವಸ್ಥೆಯ ಬಲವರ್ಧನೆ ಹಾಗೂ ಕಾಮನ್‌ವೆಲ್ತ್ ರಾಷ್ಟ್ರ ಗಳ ನಡುವೆ ಪರಸ್ಪರ ಸಹಕಾರ ವೃದ್ಧಿಸುವ ನಿಟ್ಟಿನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಈ ಉನ್ನತ ಮಟ್ಟದ ಸಭೆಯಲ್ಲಿ ರಾಜ್ಯಸಭೆ ಉಪ ಸಭಾಪತಿ ಹರಿವಂಶ್ ನಾರಾಯಣ್ ಸಿಂಗ್, ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್, ವಿವಿಧ ರಾಜ್ಯಗಳ ವಿಧಾನಸಭೆಗಳ ಸಭಾಧ್ಯಕ್ಷರು ಹಾಗೂ ಕೇಂದ್ರ ಮತ್ತು ರಾಜ್ಯ ಶಾಸಕಾಂಗ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net