ಅಧಿಕಾರಿಗಳು ಆಗಾಗ ಕೇಂದ್ರಗಳಿಗೆ ಭೇಟಿ ನೀಡಿ ಶುಚಿ-ರುಚಿಯಾದ ಆಹಾರ, ಶುದ್ಧ ಕುಡಿಯುವ ನೀರು, ಸರ್ಕಾರ ನೀಡುವ ಮೊಟ್ಟೆ, ಬಾಳೆಹಣ್ಣು, ಹಾಲು ಇತ್ಯಾದಿ ಸೌಲಭ್ಯಗಳು ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಬೇಕು. ಆಹಾರದ ದಾಸ್ತಾನು ಎಷ್ಟಿದೆ ಎಂಬ ದಾಖಲೆಗಳನ್ನು ಪರಿಶೀಲಿಸಿ, ಲೋಪದೋಷಗಳಿದ್ದರೆ ತಕ್ಷಣವೇ ಬಗೆಹರಿಸಬೇಕು. ನಿರ್ಲಕ್ಷ್ಯ ವಹಿಸಿದರೆ ಸಾರ್ವಜನಿಕರ ಆಕ್ರೋಶ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು. ಅಲ್ಲದೆ, ಮುಂಬರುವ ದಿನಗಳಲ್ಲಿ ತೀವ್ರ ಅಪೌಷ್ಟಿಕತೆಯಿಂದ ಬಳಲುವ ಮಕ್ಕಳ ಸಂಖ್ಯೆ ಕಡಿಮೆಯಾಗಬೇಕೇ ಹೊರತು ಹೆಚ್ಚಾಗಬಾರದು ಎಂದರು.