Pulse polio 21ರಂದು ಪಲ್ಸ್ ಪೋಲಿಯೋ ಅಭಿಯಾನ

ರೋಣ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ( Pulse polio )ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
ರೋಣ ತಹಸೀಲ್ದಾರ್ ಕಚೇರಿಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ( Pulse polio )ಅಭಿಯಾನದ ಪೂರ್ವಭಾವಿ ಸಭೆ ನಡೆಯಿತು.
Published on
ರೋಣ: ದೇಶದಲ್ಲಿ ನಿರ್ಮೂಲನೆಗೊಂಡಿರುವ ಪೋಲಿಯೋ Pulse polio ರೋಗವನ್ನು ಮುಂದೆಯೂ ಬರದಂತೆ ಎಚ್ಚರಿಕೆ ವಹಿಸಲು ದೇಶಾದ್ಯಂತ ಡಿ. 21ರಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ತಹಸೀಲ್ದಾರ್ ನಾಗರಾಜ ಕೆ. ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಾರ್ಯಾಲಯದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯ, ಮಕ್ಕಳ ಆರೋಗ್ಯ ವಿಭಾಗ, ಪಂಚಾಯತ್ ರಾಜ್ ಇಲಾಖೆ ಮತ್ತು ತಾಲೂಕು ಆರೋಗ್ಯ ಅಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ತಾಲೂಕು ಟಾಸ್ಕ್ ಫೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸವಡಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ. ಅರವಿಂದ ಕಂಬಳಿ ಮಾತನಾಡಿ, ರೋಣ ಮತ್ತು ಗಜೇಂದ್ರಗಡ ತಾಲೂಕಿನಲ್ಲಿ ಐದು ವರ್ಷದೊಳಗಿನ 29, 690 ಮಕ್ಕಳನ್ನು ಗುರಿಯಾಗಿಸಿಕೊಂಡು 191 ತಂಡಗಳನ್ನು ರಚಿಸಲಾಗಿದೆ. ಐದು ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ಲಸಿಕೆ ಕೊಡಿಸಬೇಕು ಎಂದರು.
ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಕೆ.ಎ. ಹಾದಿಮನಿ ಮಾತನಾಡಿ, ರೋಣ ಮತ್ತು ಗಜೇಂದ್ರಗಡ ತಾಲೂಕಿನಲ್ಲಿ 38 ಅಪಾಯಕಾರಿ ಪ್ರದೇಶಗಳಲ್ಲಿ 3,352 ಐದು ವರ್ಷದ ಒಳಗಿನ ಮಕ್ಕಳನ್ನು ಗುರುತಿಸಲಾಗಿದೆ ಎಂದರು.
ತಾಪಂ ಇಒ ಚಂದ್ರಶೇಖರ ಕಂದಕೂರ, ಸಿಡಿಪಿಒ ಶಿವಗಂಗಮ್ಮ, ರೋಣ ಪಿಎಸ್‌ಐ ಪ್ರಕಾಶ ಬಣಕಾರ, ಸಮಾಜ ಕಲ್ಯಾಣ ಅಧಿಕಾರಿ ಗೀತಾ ಆಲೂರ, ರೋಣ ಮತ್ತು ಗಜೇಂದ್ರಗಡ ತಾಲೂಕಿನ ಆರೋಗ್ಯ ಸಂಸ್ಥೆ ವೈದ್ಯಾಧಿಕಾರಿಗಳು, ಆರ್‌ಬಿಎಸ್‌ಕೆ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net