ಕಳೆದ ಹಲವು ತಿಂಗಳಿಂದ ಅಕ್ರಮ ಮೊರಂ ತೆಗೆದು ಸಾಗಾಟ ಮಾಡುತ್ತಿದ್ದಾರೆಂಬ ಆರೋಪವಿದೆ. ಜಮೀನಿನಲ್ಲಿ ಮೊರಂ ತೆಗೆಯಲು ಗ್ರಾಮ ಪಂಚಾಯಿತಿ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ತಹಸೀಲ್ದಾರ್ ಹಾಗೂ ಕಂದಾಯ ಇಲಾಖೆಯಿಂದ ಪರವಾನಗಿ ಪಡೆಯಬೇಕೆಂಬ ನಿಯಮವಿದ್ದರೂ ದಂಧೆಕೋರರಿಗೆ ಅದು ಅನ್ವಯಿಸುವುದಿಲ್ಲ. ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ಆದಾಯ ನಷ್ಟವಾದರೂ ಯಾವೊಬ್ಬ ಅಧಿಕಾರಿಯೂ ಇತ್ತ ಸುಳಿಯದಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.