ಪಿಎಸ್‌ಐ ಈರಣ್ಣ ರಿತ್ತಿ ವರ್ಗಾವಣೆ ಆಗ್ರಹಿಸಿ ಪ್ರತಿಭಟನೆ PSI

PSI ಹಿಂದು ವಿರೋಧಿ ನೀತಿ ಅನುಸರಿಸುತ್ತಿರುವ ಶಿರಹಟ್ಟಿ ಪೊಲೀಸ್ ಠಾಣೆ ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ವರ್ಗಾವಣೆಗೊಳಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ತಹಸೀಲ್ದಾರ್ ಮೂಲಕ ಉತ್ತರ ವಲಯ ಬೆಳಗಾವಿ ಪೊಲೀಸ್ ಮಹಾನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿದರು.
PSI ಹಿಂದು ವಿರೋಧಿ ನೀತಿ ಅನುಸರಿಸುತ್ತಿರುವ ಶಿರಹಟ್ಟಿ ಪೊಲೀಸ್ ಠಾಣೆ ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ವರ್ಗಾವಣೆಗೊಳಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಹಿಂದು ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ತಹಸೀಲ್ದಾರ್ ಮೂಲಕ ಉತ್ತರ ವಲಯ ಬೆಳಗಾವಿ ಪೊಲೀಸ್ ಮಹಾನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿದರು.
Published on
ಶಿರಹಟ್ಟಿ: ಹಿಂದು ವಿರೋಧಿ ನೀತಿ ಅನುಸರಿಸುತ್ತಿರುವ ಶಿರಹಟ್ಟಿ ಪೊಲೀಸ್ ಠಾಣೆ PSI ಪಿಎಸ್‌ಐ ಈರಣ್ಣ ರಿತ್ತಿ ಅವರನ್ನು ವರ್ಗಾವಣೆಗೊಳಿಸಿ ಅವರ ವಿರುದ್ಧ ಸೂಕ್ತ ಶಿಸ್ತು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ರಾಜ್ಯ ಹಿಂದು ಸಂಘಟನೆಗಳ ಒಕ್ಕೂಟದ ಸದಸ್ಯರು ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಮೂಲಕ ಉತ್ತರ ವಲಯ ಬೆಳಗಾವಿ ಪೊಲೀಸ್ ಮಹಾನಿರ್ದೇಶಕರಿಗೆ ಸೋಮವಾರ ಮನವಿ ಸಲ್ಲಿಸಿದರು.
ತಹಸೀಲ್ದಾರ್ ಕಚೇರಿ ಮುಂದೆ ಬೆಳಗ್ಗೆಯಿಂದ ಪ್ರತಿಭಟನೆ ನಡೆಸಿದರು. ಸಂಜೆ ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಅವರಿಗೆ ಮನವಿ ಸಲ್ಲಿಸಿದರು. ಏಳು ದಿನಗಳ ಒಳಗಾಗಿ ಶಿರಹಟ್ಟಿ ಪಿಎಸ್‌ಐ ಮೇಲೆ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಜಿಲ್ಲಾದ್ಯಂತ ತೀವ್ರ ಹೋರಾಟ, ಸರದಿ ಸತ್ಯಾಗ್ರಹ, ಅಹೋರಾತ್ರಿ ಧರಣಿ, ವಾಹನ ಸಂಚಾರ ತಡೆ, ಆಮರಣ ಉಪವಾಸದಂತಹ ಹೋರಾಟ ವಿವಿಧ ಹಿಂದು ಸಂಘಟನೆಗಳ ಸಹಯೋಗದಲ್ಲಿ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.
ಸಮಗ್ರ ತನಿಖೆಗೆ ಆಗ್ರಹ: ಶ್ರೀರಾಮ ಸೇನೆ ರಾಜ್ಯ ಸಂಚಾಲಕ ರಾಜು ಖಾನಪ್ಪನವರ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಹಿಂದುಗಳ ಮೇಲೆ ದೌರ್ಜನ್ಯ, ಸುಳ್ಳು ಪ್ರಕರಣ ದಾಖಲಿಸುವ ಮೂಲಕ ಸದೆಬಡೆಯಲು ಪ್ರಯತ್ನಿಸಲಾಗುತ್ತಿದೆ. ಪಿಎಸ್‌ಐ ಈರಣ್ಣ ರಿತ್ತಿ ಅವರು ಹಿಂದು ಸಮಾಜದ ಯುವಕರನ್ನೇ ಗುರಿಯಾಗಿಟ್ಟುಕೊಂಡಿದ್ದಾರೆ. ಹಿಂದುಗಳನ್ನು ಮಟ್ಟಹಾಕಲು ಹವಣಿಸುತ್ತಿರುವವರು ಯಾರು ಎಂಬುದರ ಕುರಿತು ಸಮಗ್ರ ತನಿಖೆ ನಡೆಸಬೇಕು.
ತಾಲೂಕಿನ ದೇವಿಹಾಳ ತಾಂಡಾದ ಸೋಮಪ್ಪ ಲಮಾಣಿ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ಮನಸೋ ಇಚ್ಛೆ ಥಳಿಸಿ ತೀವ್ರ ಗಾಯಗೊಳಿಸಿದ್ದಾರೆ. ಪಿಎಸ್‌ಐ ಈರಣ್ಣ ರಿತ್ತಿ ಅವರು ಕಳೆದ ವಷರ್ವೂ ನವರಾತ್ರಿ ಉತ್ಸವದ ಸಂದರ್ಭದಲ್ಲಿ ಶಾಂತಿಯುತವಾಗಿ ದುರ್ಗಾ ಮೂರ್ತಿಯನ್ನು ವಿಸರ್ಜನೆ ಮಾಡಿ ಮನೆಗೆ ವಾಪಸಾಗುತ್ತಿದ್ದ ಗೋಸಾವಿ ಸಮಾಜದವರ ಮೇಲೆ ಲಾಠಿ ಚಾರ್ಜ್ ನಡೆಸಿದ್ದಾರೆ ಎಂದು ದೂರಿದರು. 
ಹಿಂದು ಸಂಘಟನೆಗಳ ಒಕ್ಕೂಟದ ಮುಂಖಂಡ ಸಂತೋಷ ಕುರಿ ಮಾತನಾಡಿದರು. ತಹಸೀಲ್ದಾರ್ ಕೆ. ರಾಘವೇಂದ್ರರಾವ್ ಮನವಿ ಸ್ವೀಕರಿಸಿದರು. ಸೋಮಪ್ಪ ಲಮಾಣಿ, ಗಂಗವ್ವ ಲಮಾಣಿ, ಪ್ರಾಣೇಶ ವ್ಯಾಪಾರಿ, ಮುತ್ತು ಕರ್ಜಕ್ಕಣ್ಣವರ, ಚಿನ್ನೂ ಹಾಳದೋಟದೆ, ಹನುಮಂತ ರಾಮಗೇರಿ, ಮುತ್ತು ಗೊಜನೂರ, ಅಜಯ್ ಬಳಗನ್ನವರ, ವೆಂಕಟೇಶ ದೊಡ್ಡಮನಿ, ವಿಶಾಲ ಗೋಕಾವಿ, ಸಾಗರ ಹುಯಿಲಗೋಳ, ಗೀತವ್ವ ಲಮಾಣಿ, ಸೋಮು ಬಂಡಿವಡ್ಡರ, ರವಿ ಲಮಾಣಿ, ಕಿಮೇಶ ಲಮಾಣಿ, ಪರಶುರಾಮ ಜಲ್ಲಿಗೇರಿ, ನೀಲಪ್ಪ ಸಿಪಾಯಿ, ಹನುಮಂತ ಶಿರಹಟ್ಟಿ ಉಪಸ್ಥಿತಿರಿದ್ದರು.
"

ಈ ಹಿಂದೆ ಶಿರಹಟ್ಟಿಯಲ್ಲಿ ಕಾರ್ಯನಿರ್ವಹಿಸಿದ ಅಧಿಕಾರಿ ಜನವಿರೋಧಿ, ಹಿಂದು ವಿರೋಧಿ ನೀತಿ ಅನುಸರಿಸಿದ್ದರು. ಮತ್ತೆ ಶಿರಹಟ್ಟಿ ಠಾಣೆಗೆ ವರ್ಗಾವಣೆ ಆಗಿ ಬಂದಿರುವ ಕಾರಣವಾದರೂ ಏನು ಎಂದು ಪ್ರಶ್ನಿಸಿದರು. ಮುಗ್ಧ ಲಮಾಣಿ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವ ಅಧಿಕಾರಿಯನ್ನು ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು. 

ಸಂತೋಷ ಕುರಿ ಹಿಂದು ಸಂಘಟನೆಗಳ ಒಕ್ಕೂಟದ ಸಂಚಾಲಕ.


ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net