SUICIDE ATTEMPT: ಶಾಸಕ ಜಿ.ಎಸ್ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಜಿ.ಎಸ್. ಪಾಟೀಲ ಅವರ ಇಬ್ಬರು ಅಭಿಮಾನಿಗಳು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಜಿ.ಎಸ್. ಪಾಟೀಲ ಅವರ ಇಬ್ಬರು ಅಭಿಮಾನಿಗಳಿಂದ ಆತ್ಮಹತ್ಯೆಗೆ ಯತ್ನ
ಗಜೇಂದ್ರಗಡ: ರೋಣ ಮತಕ್ಣೇತ್ರದ ಶಾಸಕ ಜಿ.ಎಸ್ ಪಾಟೀಲ ಅವರಿಗೆ ಸಚಿವ ಸ್ಥಾನ ನೀಡುವಂತೆ ಆಗ್ರಹಿಸಿ(SUICIDE ATTEMPT) ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ವೃತ್ತದಲ್ಲಿ ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಹಮ್ಮಿಕೊಂಡ ಪ್ರತಿಭಟನೆ ವೇಳೆ ಜಿ.ಎಸ್. ಪಾಟೀಲ ಅವರ ಇಬ್ಬರು ಅಭಿಮಾನಿಗಳು ಮೈಮೇಲೆ ಪೆಟ್ರೋಲ್ ಸುರಿದುಕೊಂಡು (SUICIDE ATTEMPT) ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ದಿಂಡೂರ ಗ್ರಾಮದ ಸಂಗಪ್ಪ ತೇಜಿ ಹಾಗೂ ಮಾರನಬಸರಿ ಗ್ರಾಮದ ರವಿಕುಮಾರ ಗಡಾದ ಎಂಬುವವರು ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರು. ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ತಡೆಯಲು ಮುಂದಾದಾಗ ಸ್ಥಳದಲ್ಲಿ ಕೆಲಕಾಲ ಹೈಡ್ರಾಮಾ ನಡೆಯಿತು.
ಗದಗ ಜಿಲ್ಲೆಯ ರೋಣ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ.ಎಸ್ ಪಾಟೀಲಗೆ ಈ ಬಾರಿ ಸಚಿವ ಸ್ಥಾನ ನೀಡಲು ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
ಗಜೇಂದ್ರಗಡ ಪಟ್ಟಣದ ಕಾಲಕಾಲೇಶ್ವರ ಸರ್ಕಲ್‌ನಲ್ಲಿ ಗಜೇಂದ್ರಗಡ, ರೋಣ, ನರೇಗಲ್ ಭಾಗದ ಅನೇಕ ಕಾರ್ಯಕರ್ತರು ಸ್ವ ಪಕ್ಷದ ವಿರುದ್ಧ ಪ್ರತಿಭಟನೆಗೆ ಮುಂದಾಗಿದ್ದಾರೆ. ಕಾಲಕಾಲೇಶ್ವರ ಸರ್ಕಲ್ ನಲ್ಲಿ ರಸ್ತೆ ಸಂಚಾರ ಬಂದ್ ಮಾಡಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ಹೊರಹಾಕಿದರು.