ಸೂರ್ಯಕಾಂತಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ

Gadag DC C N Shridhar
ಸಿ.ಎನ್​. ಶ್ರೀಧರ
Published on: 

ಗದಗ: ಪ್ರಸಕ್ತ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿ ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಪ್ರತಿ ಕ್ವಿಂಟಾಲ್​ಗೆ 8343 ರೂ. ನಿಗದಿಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್​. ಶ್ರೀಧರ ಹೇಳಿದರು.

ಜಿಲ್ಲಾಡಳಿತ ಬವನದಲ್ಲಿ ಬುಧವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಿಲ್ಲೆಯಲ್ಲಿ ತೆರೆಯಲಾಗುವ ಸೂರ್ಯಕಾಂತಿ ಹುಟ್ಟುವಳಿ ಖರೀದಿ ಕೇಂದ್ರಗಳಲ್ಲಿ ಖರೀದಿಸಲಾಗುವ ಎ್​ಎಕ್ಯೂ ಗುಣಮಟ್ಟ ಪರಿಶೀಲನೆಗೆ ಗ್ರೇಡರ್​ಗಳನ್ನು ನೇಮಕ ಮಾಡಬೇಕು ಮತ್ತು ಅವರಿಗೆ ಗ್ರೇಡಿಂಗ್​ ತರಬೇತಿ ನೀಡಬೇಕು. ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 4 ಕ್ವಿಂಟಾಲ್​ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ ಗರಿಷ್ಟ 20 ಕ್ವಿಂಟಾಲ್​ ಸೂರ್ಯಕಾಂತಿ ಖರೀದಿಸಬೇಕು. ಸರ್ಕಾರದ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಹುಟ್ಟುವಳಿ ಖರೀದಿಯ ಕುರಿತು ರೈತರಿಗೆ ತಿಳುವಳಿಕೆ ನೀಡಲು ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಹಾಗೂ ಜಿಲ್ಲೆಯ ರೈತರು ಈ ಯೋಜನೆಯ ಲಾಭ ಪಡೆಯಲು ಅನುಕೂಲವಾಗುವಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಕಾರಿ ಸಿ. ಎನ್​.ಶ್ರಿಧರ ಹೇಳಿದರು.

ಗುಣಮಟ್ಟದ ಸೂರ್ಯಕಾಂತಿ ಹುಟ್ಟುವಳಿಗೆ ಪ್ರತಿ ಕ್ವಿಂಟಾಲ್​ಗೆ 8343 ರೂ ಗಳಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿ ಅನ್ವಯ ಸರ್ಕಾರದ ಆದೇಶದನುಸಾರ ನ್ಯಾಪೆಡ್​ ಸಂಸ್ಥೆ ಹಾಗೂ ಎನ್​ಸಿಸಿಎ್​ ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣಿ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ಇವರನ್ನು ರಾಜ್ಯ ಮಟ್ಟದ ಖರೀದಿ ಏಜನ್ಸಿಯನ್ನಾಗಿ ನೇಮಿಸಲಾಗಿದೆ. ಸರ್ಕಾರದ ಆದೇಶದ ದಿನಾಂಕದಿಂದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಲು ಆದೇಶಿಸಿದೆ.
ಸುಧಾ ಬಂಡಿ, ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕಿ

ಸಭೆಯಲ್ಲಿ ಜಿಲ್ಲೆಯ 11 ಸ್ಥಳಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲು ತೀರ್ಮಾನಿಸಲಾಯಿತು. ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ತೋಟಗಾರಿಕೆ ಇಲಾಖೆ, ಸಹಕಾರಿ ಸಂಗಳ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net