ಈ ವಷರ್ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಹೆಸರು, ಜೋಳ, ಮೆಕ್ಕೆಜೋಳ, ತೊಗರಿ, ಹತ್ತಿ ಸೇರಿದಂತೆ ವಿವಿಧ ಬೆಳೆಗಳು ಒಣಗುತ್ತಿವೆ. ಈಗಾಗಲೇ ಬಿತ್ತನೆಗೆ ಮಾಡಿದ ಸಾವಿರಾರು ರೂಪಾಯಿ ವೆಚ್ಚ ವ್ಯರ್ಥವಾಗಿದ್ದು, ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಹೇಳಿದರು. ಸರ್ಕಾರ ಕೂಡಲೇ ಬೆಳೆ ಹಾನಿ ಸಮೀಕ್ಷೆ ನಡೆಸಿ ಶಿರಹಟ್ಟಿ ತಾಲೂಕನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಬೇಕು. ರೈತರಿಗೆ ಪರಿಹಾರಧನ, ಬೆಳೆ ವಿಮೆ, ಬಡ್ಡಿರಹಿತ ಸಾಲ ಮರುಪಾವತಿಗೆ ಅವಧಿ ವಿಸ್ತರಣೆ, ಕೃಷಿ ಸಾಲದ ಮೇಲಿನ ಬಡ್ಡಿ ಮನ್ನಾ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವು ಒದಗಿಸುವ ಕ್ರಮ ಕೈಗೊಳ್ಳಬೇಕು ಎಂದು ರೈತರು ಮನವಿ ಮಾಡಿದರು.