school vehicles ಶಾಲಾ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಿ

school vehicles ಶಾಲಾ ವಾಹನ
school vehicles ಶಾಲಾ ವಾಹನ
Published on

ಲಕ್ಷ್ಮೇಶ್ವರ: ಖಾಸಗಿ ಶಾಲೆಗಳಲ್ಲಿ ಶಾಲಾ ವಾಹನಗಳ (school vehicles) ನಿರ್ವಹಣೆ ಮತ್ತು ಮಕ್ಕಳ ಬಗ್ಗೆ ಕಾಳಜಿಗೆ ಕ್ರಮ ವಹಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಕಟ್ಟುನಿಟ್ಟಿನ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕ ಘಟಕದ ವತಿಯಿಂದ ತಹಸೀಲ್ದಾರ್ ಧನಂಜಯ ಅವರಿಗೆ ಮನವಿ ಸಲ್ಲಿಸಲಾಯಿತು. ಕರವೇ ತಾಲೂಕಾಧ್ಯಕ್ಷ ಲೋಕೇಶ ಸುತಾರ ಮಾತನಾಡಿ, ಶಾಲಾ ವಾಹನದಿಂದ ಬಾಲಕ ಬಿದ್ದು ಸಾವನಪ್ಪಿದ ದುರ್ಘಟನೆ ನೋವಿನ ಸಂಗತಿ. ಇದಕ್ಕೆ ಕಡಿವಾಣ ಹಾಕಬೇಕು.ಮೃತ ವಿದ್ಯಾರ್ಥಿಯ ಕುಟಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಕರವೇ ಕಾರ್ಯಕರ್ತರಾದ ಪ್ರವೀಣ ಗಾಣಗೇರ, ಬಸವರಾಜ ಮಲ್ಲೂರ, ಗಂಗಾಧರ ಕೊಂಚಿಗೇರಿಮಠ, ಅರುಣ ಮೆಕ್ಕಿ, ಪ್ರಕಾಶ ಕೊಂಚಿಗೇರಿಮಠ, ಗಂಗಾಧರ ಕರ್ಜೇಕಣ್ಣವರ, ಗಣೇಶ ಇತರರಿದ್ದರು!.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net