polio 12,597 ಮಕ್ಕಳಿಗೆ ಪೊಲಿಯೋ ಲಸಿಕೆ ಹಾಕುವ ಗುರಿ

 polio ಪಲ್ಸ್ ಪೋಲಿಯೋ ಅಭಿಯಾನ
polio ಪಲ್ಸ್ ಪೋಲಿಯೋ ಅಭಿಯಾನ
Published on
ಮುಂಡರಗಿ: ಪಲ್ಸ್ ಪೋಲಿಯೋ ಅಭಿಯಾನ ( polio) ಯಶಸ್ವಿಗೊಳಿಸಲು ಪುರಸಭೆ ಹಾಗೂ ಗ್ರಾಪಂಗಳಲ್ಲಿ ಡಂಗೂರ ಸಾರಿ ಮಾಹಿತಿ ನೀಡಬೇಕು. ಶಾಲಾ ಮಕ್ಕಳಿಂದ ಜನಜಾಗೃತಿ ಜಾಥಾ ಆಯೋಜಿಸಬೇಕು. ಪೊಲಿಯೋ ಕಾರ್ಯದಲ್ಲಿ ತೊಡಗುವ ಸಿಬ್ಬಂದಿಗೆ ಅಗತ್ಯ ಸೌಲಭ್ಯ ಕಲ್ಪಿಸಬೇಕು ಎಂದು ತಹಸೀಲ್ದಾರ್ ಎರ‌್ರಿಸ್ವಾಮಿ ಪಿ.ಎಸ್. ಹೇಳಿದರು.
ತಹಸೀಲ್ದಾರ್ ಕಚೇರಿಯಲ್ಲಿ ಆರೋಗ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಅನುಷ್ಠಾನ ಕಾರ್ಯಕ್ರಮದ ತಾಲೂಕು ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು.
ತಾಲೂಕು ಆರೋಗ್ಯಾಧಿಕಾರಿ ಡಾ. ಸಂತೋಷಗೌಡ ಪಾಟೀಲ ಮಾತನಾಡಿ, ತಾಲೂಕಿನಾದ್ಯಂತ ಒಟ್ಟು 12,597 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೂ. 28ರಿಂದ ಜು. 1ರವರೆಗೆ ಕಾರ್ಯಕ್ರಮ ಜಾರಿಯಲ್ಲಿರಲಿದೆ ಎಂದು ಹೇಳಿದರು. ತಾಲೂಕು ಆರೋಗ್ಯ ಶಿಕ್ಷಣಾಧಿಕಾರಿ ಮಂಜುಳಾ ಸಜ್ಜನರ ಮಾತನಾಡಿ, ಜೂ. 28ರಂದು ಬೂತ್ ಮಟ್ಟದಲ್ಲಿ ಮಕ್ಕಳಿಗೆ ಲಸಿಕೆ ಹಾಕಲಾಗುವುದು. ಜೂ. 29ರಿಂದ ಜುಲೈವರೆಗೆ ಲಸಿಕಾ ಕೇಂದ್ರಕ್ಕೆ ಬರದಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಲಸಿಕೆ ನೀಡಲಾಗುವುದು. ಲಸಿಕೆ ಕಾರ್ಯಕ್ರಮದ ಯಶಸ್ವಿಗಾಗಿ ತಾಲೂಕಿನಲ್ಲಿ ಒಟ್ಟು 104 ತಂಡಗಳನ್ನು ರಚಿಸಲಾಗಿದೆ ಎಂದರು. ಪುರಸಭೆ ಆರೋಗ್ಯಾಧಿಕಾರಿ ಎಂ.ಎಸ್. ಮ್ಯಾಗೇರಿ, ಕಂದಾಯ ಇಲಾಖೆಯ ಈರಣ್ಣ ದೊಡ್ಡಮನಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net