cooperative: ಆರ್ಥಿಕಾಭಿವೃದ್ಧಿಗೆ ಸಹಕಾರಿ ಸಂಘದ ಪಾತ್ರ ಮಹತ್ವದ್ದು

ಮುಂಡರಗಿ ತಾಲೂಕಿನ ಬಿದರಹಳ್ಳಿ ಗ್ರಾಮದ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಆಹಾರ ಧಾನ್ಯ ಮಳಿಗೆಗಳನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್.ಪಾಟೀಲ ಮಾತನಾಡಿದರು. ಶಾಸಕ ಡಾ.ಚಂದ್ರು ಲಮಾಣಿ, ಶಿವಕುಮಾರಗೌಡ ಪಾಟೀಲ, ಶ್ರೀಕಾಂತಗೌಡ ಪಾಟೀಲ ಇತರರಿದ್ದರು.
ಮುಂಡರಗಿ ತಾಲೂಕಿನ ಬಿದರಹಳ್ಳಿ ಗ್ರಾಮದ ಆಯೋಜಿಸಿದ್ದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಆಹಾರ ಧಾನ್ಯ ಮಳಿಗೆಗಳನ್ನು ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಸ್.ಎಸ್.ಪಾಟೀಲ ಮಾತನಾಡಿದರು. ಶಾಸಕ ಡಾ.ಚಂದ್ರು ಲಮಾಣಿ, ಶಿವಕುಮಾರಗೌಡ ಪಾಟೀಲ, ಶ್ರೀಕಾಂತಗೌಡ ಪಾಟೀಲ ಇತರರಿದ್ದರು.
Published on
ಮುಂಡರಗಿ: ಗ್ರಾಮೀಣ ಪ್ರದೇಶದ ರೈತಾಪಿ ಜನರ ಆರ್ಥಿಕ ಅಭಿವೃದ್ಧಿಯಲ್ಲಿ ಸಹಕಾರಿ ಸಂಘಗಳ (cooperative) ಪಾತ್ರ ದೊಡ್ಡದಿದೆ. ಜಗತ್ತಿನ ಉದ್ಧಾರವಾಗಬೇಕೆಂದರೆ ಮುಖ್ಯವಾಗಿ ರೈತನ ಉದ್ಧಾರವಾಗಬೇಕು. ಈ ನಿಟ್ಟಿನಲ್ಲಿ ಪ್ರತಿಯೊಬ್ಬ ನಾಯಕರು ಕೃಷಿ ಅಭಿವೃದ್ಧಿ ಕಾರ್ಯಗಳಿಗೆ ಆದ್ಯತೆ ನೀಡಿ ಕಾರ್ಯ ಯೋಜನೆ ರೂಪಿಸಬೇಕು ಎಂದು ಮಾಜಿ ಸಚಿವ ಎಸ್.ಎಸ್. ಪಾಟೀಲ ಹೇಳಿದರು.
ತಾಲೂಕಿನ ಬಿದರಹಳ್ಳಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಹಾಗೂ ಆಹಾರ ಧಾನ್ಯ ಮಳಿಗೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಸಹಕಾರಿ ಸಂಘಗಳಲ್ಲಿ ಹಿಂದೆ ಅಲ್ಪ ಪ್ರಮಾಣದ ಸಾಲ ದೊರೆಯುತ್ತಿತ್ತು. ಆದರೆ ಈಗ ಗರಿಷ್ಠ 5 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿ ದರದಲ್ಲಿ ಕೃಷಿ ಸಾಲ ನೀಡುತ್ತಿದ್ದು, ರೈತನ ಕೃಷಿ ಚಟುವಟಿಕೆಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ’ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿ, ಸಹಕಾರಿ ಸಂಘಗಳು ಉಳಿದು ಬೆಳೆಯಬೇಕೆಂದರೆ ಅದರ ನಿರ್ವಹಣೆ ಜವಾಬ್ದಾರಿ ಹೊತ್ತಿರುವ ಆಡಳಿತ ಮಂಡಳಿ ಜವಾಬ್ದಾರಿ ಬಹಳ ಮುಖ್ಯ. ಪಾರದರ್ಶಕವಾದ ಸಾಲ ವಿತರಣೆ, ಸಮಯಾನುಸಾರ ಸಾಲ ಮಸೂಲಿ ಮಾಡಿದಾಗ ಮಾತ್ರ ಸಹಕಾರಿ ಸಂಘಗಳು ಉತ್ತರೋತ್ತರವಾಗಿ ಬೆಳವಣಿಗೆ ಹೊಂದಲು ಸಾಧ್ಯ. ಕಾಲಕಾಲಕ್ಕೆ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಪ್ರಾಮಾಣಿಕವಾಗಿ ಕ್ಷೇತ್ರದ ಜನತೆಗೆ ತಲುಪಿಸಲು ಶ್ರಮಿಸುತ್ತೇನೆ ಎಂದು ತಿಳಿಸಿದರು.
ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಶಿವಕುಮಾರಗೌಡ ಪಾಟೀಲ ಮಾತನಾಡಿ, ರೈತರಿಗೆ ಬ್ಯಾಂಕ್‌ನಿಂದ ಸಿಗಬಹುದಾದ ಸೌಲಭ್ಯಗಳನ್ನು ಸಹಕಾರಿ ಸಂಘಗಳ ಮೂಲಕ ಒದಗಿಸಲಾಗುತ್ತದೆ. ರೈತರ ಆರ್ಥಿಕ ಅಭಿವೃದ್ದಿಗೆ ಸಹಕಾರಿ ಬ್ಯಾಂಕ್‌ನಿಂದ ಸಹಾಯ ಸಹಕಾರ ನೀಡಲಾಗುತ್ತದೆ ಎಂದರು.
ಹೇಮಂತಗೌಡ ಪಾಟೀಲ, ಹೇಮಗಿರೀಶ ಹಾವಿನಾಳ ಮಾತನಾಡಿದರು. ಬಿದರಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಶ್ರೀಕಾಂತಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಂಘದಿಂದ ಸಾಲಗಳ ಚೆಕ್ ವಿತರಿಸಲಾಯಿತು. ಡಾ.ಕುಮಾರಸ್ವಾಮಿ ಹಿರೇಮಠ ಆನಂದಗೌಡ ಪಾಟೀಲ, ಶಿವಪ್ಪ ಅಂಕದ, ರಾಮಚಂದ್ರ ಕಲಾಲ ಉಪಸ್ಥಿತರಿದ್ದರು. ಎಂ.ಎಚ್. ವರ್ದಿ ಸ್ವಾಗತಿಸಿದರು. ಎಸ್.ವಿ. ಪಾಟೀಲ ನಿರೂಪಿಸಿದರು. ಹನುಮಂತಪ್ಪ ಚವಡಾಳ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net