state government ರಾಜ್ಯ ಸರ್ಕಾರದಿಂದ ಜನರ ಧ್ವನಿ ಹತ್ತಿಕ್ಕುವ ಕೆಲಸ

 ರಾಜ್ಯ ಸರ್ಕಾರ (state government) ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರ (state government) ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
Published on
ಮುಂಡರಗಿ: ರಾಜ್ಯ ಸರ್ಕಾರ state government ಅನುಷ್ಠಾನಕ್ಕೆ ತರುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ ವಿರೋಧಿಸಿ ಬಿಜೆಪಿ ಮುಂಡರಗಿ ಮಂಡಲ ಕಾರ್ಯಕರ್ತರು ಬುಧವಾರ ಪ್ರತಿಭಟನೆ ನಡೆಸಿದರು.
ಬಿಜೆಪಿ ಪ್ರಮುಖರಾದ ಕರಬಸಪ್ಪ ಹಂಚಿನಾಳ, ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರವು ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕವನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು.
ಇದು ಭಾರತದ ಸಂವಿಧಾನಕ್ಕೆ ವಿರುದ್ಧವಾಗಿದೆ. ಸಾರ್ವಜನಿಕರ ಅಭಿವ್ಯಕ್ತಿ ಸ್ವಾತಂತ್ರ್ಯ, ಹಕ್ಕುಗಳನ್ನು ಕಸಿದುಕೊಳ್ಳುತ್ತದೆ. ಸರ್ಕಾರದ ವಿರುದ್ಧ ಮಾತನಾಡುವವರ ಬಾಯಿ ಮುಚ್ಚಿಸುವ ಸಾಧನವಾಗಿದೆ.
ಇದರಡಿ ದ್ವೇಷ ಭಾಷಣಕ್ಕೆ ನೀಡಿರುವ ವ್ಯಾಖ್ಯಾನವೇ ಅಸ್ಪಷ್ಟವಾಗಿದೆ. ಸರ್ಕಾರದ ನೀತಿಗಳ ವಿರುದ್ಧ ಟೀಕೆ, ಸಾಮಾಜಿಕ ಚರ್ಚೆ, ವ್ಯಂಗ್ಯ ಮಾಡುವುದು ಅಥವಾ ಸತ್ಯ ಹೇಳುವುದನ್ನೂ ದ್ವೇಷ ಎಂದು ಪರಿಗಣಿಸುವ ಅಪಾಯವಿದೆ.
ಜನರ ಧ್ವನಿ ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ. ಈ ಬಗ್ಗೆ ರಾಜ್ಯಪಾಲರು ಗಮನ ಹರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಮುಂಡರಗಿ ಬಿಜೆಪಿ ಮಹಿಳಾ ಘಟಕದ ಅಧ್ಯಕ್ಷೆ ಪವಿತ್ರಾ ಕಲ್ಲಕುಟಗರ ಮಾತನಾಡಿದರು. ತಹಸೀಲ್ದಾರ್ ಪರವಾಗಿ ಗ್ರೇಡ್-2 ತಹಸೀಲ್ದಾರ್ ಕೆ.ರಾಧಾ ಮನವಿ ಸ್ವೀಕರಿಸಿದರು.
ಪ್ರ.ಕಾರ್ಯದರ್ಶಿ ಬಸವರಾಜ ಬಿಳಿಮಗ್ಗದ, ಜ್ಯೋತಿ ಹಾನಗಲ್ಲ,ಕೊಟ್ರೇಶ ಅಂಗಡಿ, ಮಲ್ಲಿಕಾರ್ಜುನ ಹಣಜಿ, ರಮೇಶ ಹುಳಕಣ್ಣವರ, ಪರುಶುರಾಮ ಕರಡಿಕೊಳ್ಳ, ಪವನ್ ಮೇಟಿ, ದೇವು ಹಡಪದ, ಯಲ್ಲಪ್ಪ ಗಣಾಚಾರಿ, ಶ್ರೀನಿವಾಸ ಅಬ್ಬಿಗೇರಿ, ಶಿವನಗೌಡ ಗೌಡರ, ಚಿನ್ನಪ್ಪ ವಡ್ಡಟ್ಟಿ, ಮೈಲಾರಪ್ಪ ಕಲಕೇರಿ, ಎಸ್.ಎಸ್. ಗಡ್ಡದ, ರವಿ ಲಮಾಣಿ, ರವಿಗೌಡ ಪಾಟೀಲ, ಸಿದ್ದು ದೇಸಾಯಿ, ಮಂಜುನಾಥ ಮುಧೋಳ, ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net