ಬಗರ್‌ಹುಕುಂ ಸಾಗುವಳಿದಾರರಿಗೆ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಗಜೇಂದ್ರಗಡ ಪಟ್ಟಣದ ತಹಸೀಲ್ದಾರ್ ಕಚೇರಿ ಎದುರು ಬಗರ್‌ಹುಕುಂ ಸಾಗುವಳಿದಾರರು ಪ್ರತಿಭಟನೆ fightersನಡೆಸಿದರು.
Published on:
Copied
Follow Us
ಗಜೇಂದ್ರಗಡ: ಬಗರ್‌ಹುಕುಂ ಸಾಗುವಳಿದಾರರಿಗೆ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಹೋರಾಟಗಾರರ fighters ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಲಾಗುತ್ತಿದ್ದು, ರೈತರ ತಾಳ್ಮೆಯನ್ನು ಪರೀಕ್ಷಿಸಲು ಮುಂದಾಗಬಾರದು ಎಂದು ವಕೀಲ ಎಂ.ಎಸ್. ಹಡಪದ ಎಚ್ಚರಿಸಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಶುಕ್ರವಾರ ಕರ್ನಾಟಕ ಪ್ರಾಂತ ರೈತ ಸಂಘದ ನೇತೃತ್ವದಲ್ಲಿ ಬಗರ್ ಹುಕುಂ ಸಾಗುವಳಿದಾರರಿಗೆ ಗುರುತಿನ ಚೀಟಿ ನೀಡಬೇಕು ಎಂದು ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.
ಹಲವಾರು ವರ್ಷಗಳಿಂದ ತಾಲೂಕಿನ ಬಗರ್‌ಹುಕುಂ ಸಾಗುವಳಿದಾರರು ನಡೆಸುತ್ತಿರುವ ಹೋರಾಟಕ್ಕೆ ಯಾವುದೇ ಫಲ ಸಿಕ್ಕಿಲ್ಲ. ಹಲವಾರು ಬಾರಿ ಪ್ರತಿಭಟನೆ, ಮನವಿ ನೀಡಿದಾಗೊಮ್ಮೆ ಅಧಿಕಾರಿಗಳಿಂದ ಭರವಸೆ ಮಾತುಗಳನ್ನು ಕೇಳಿ ಸಾಕಾಗಿದೆ. ಸಮಸ್ಯೆಗೆ ಪರಿಹಾರ ನೀಡಬೇಕಾದವರೂ ಕ್ರಿಕೆಟ್ ಸೇರಿ ಇತರೆ ಕ್ರೀಡೆಗಳಿಗೆ ಬಹುಮಾನ ನೀಡಲು ಸಮಯ ಸಿಗುತ್ತದೆ. ಆದರೆ, ನ್ಯಾಯಸಮ್ಮತವಾದ ಬೇಡಿಕೆ ಈಡೇರಿಸಲು ನಡೆಸುವ ಹೋರಾಟಗಾರರ ಅಳಲು ಕೇಳಲು ಆಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾಕಾರರ ಅಹವಾಲು ಆಲಿಸಿದ ಅಪರ ಜಿಲ್ಲಾಧಿಕಾರಿ ಡಾ. ದುರಗೇಶ ಕೆ. ಮಾತನಾಡಿ, ತಾಲೂಕಿನಲ್ಲಿ ಈಗಾಗಲೇ 511 ಅರ್ಜಿಗಳು ಸಲ್ಲಿಕೆಯಾಗಿವೆ. ಬಗರ್‌ಹುಕುಂ ಸಾಗುವಳಿದಾರರಿಗೆ ಗುರುತಿನ ಚೀಟಿ ನೀಡಲು ಆಗ್ರಹಿಸಿ ನಡೆಸುತ್ತಿರುವ ಹೋರಾಟಗಾರರ ಜತೆಗೆ ಶೀಘ್ರದಲ್ಲೇ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಭೆ ಕರೆಯಲಾಗುವುದು ಎಂದು ಭರವಸೆ ನೀಡಿದರು.
ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಜಿಲ್ಲಾಧಿಕಾರಿಗಳು ಹಾಗೂ ಶಾಸಕರ ಸಮ್ಮುಖದಲ್ಲಿ ಸಭೆ ನಡೆಯಬೇಕು ಹಾಗೂ ಸಭೆಯ ದಿನಾಂಕವನ್ನು ಲಿಖಿತ ಪತ್ರದಲ್ಲಿ ನೀಡದರೆ ಮಾತ್ರ ಪ್ರತಿಭಟನೆ ಹಿಂಪಡೆಯುತ್ತೇವೆ. ಇಲ್ಲದಿದ್ದರೆ ಹೋರಾಟ ಮುಂದುವರಿಸುತ್ತೇವೆ ಎಂದು ಪಟ್ಟು ಹಿಡಿದರು. ಆಗ ಜಿಲ್ಲಾಧಿಕಾರಿಗಳಿಗೆ ದೂರವಾಣಿ ಕರೆ ಮಾಡಿದ ಅಪರ ಜಿಲ್ಲಾಧಿಕಾರಿಗಳು, ಜು. 3ರಂದು ಪ್ರತಿಭಟನಾ ಮುಖಂಡರೊಂದಿಗೆ ಸಭೆ ನಡೆಸಲು ತಿಳಿಸಿದ್ದಾರೆ ಎಂದಾಗ ಪ್ರತಿಭಟನೆ ಕೈಬಿಟ್ಟರು.
ಡಿವೈಎಸ್‌ಪಿ ಪ್ರಭುಗೌಡ ಕಿರೇದಹಳ್ಳಿ, ತಹಸೀಲ್ದಾರ್ ಕಿರಣಕುಮಾರ ಕುಲಕರ್ಣಿ, ರೋಣ ಸಿಪಿಐ ವಿಜಯಕುಮಾರ, ಪೀರು ರಾಠೋಡ, ಬಾಲು ರಾಠೋಡ, ಮೈಬು ಹವಾಲ್ದಾರ, ರೂಪೇಶ ಮಾಳೋತ್ತರ, ವೀರೇಧ ಮಾಳೋತ್ತರ, ಪಿರವ್ವ ರಾಠೋಡ, ಕೃಷ್ಣ ರಾಠೋಡ ಸೇರಿದಂತೆ 30ಕ್ಕೂ ಅಧಿಕ ಪ್ರತಿಭಟನಾಕಾರರು ಭಾಗವಹಿಸಿದ್ದರು.