ಲಕ್ಷ್ಮೇಶ್ವರ: ಉತ್ಪಾದನಾ ವೆಚ್ಚ ಕಡಿಮೆ ಮಾಡಿ, ಆಧುನಿಕ ಕೃಷಿ ಪದ್ಧತಿಗಳನ್ನು ಉತ್ತೇಜಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ನ್ಯಾನೋ ಯೂರಿಯಾ ರಸಗೊಬ್ಬರವನ್ನು ಪರಿಚಯಿಸಿದೆ. ಇದರ ಸಮರ್ಪಕ ಬಳಕೆಯಿಂದ ರೈತರಿಗೆ ಹೆಚ್ಚಿನ ಪ್ರಯೋಜನ ದೊರೆಯಲಿದೆ. ರೈತರು ಇದರ ಮಾಹಿತಿ ಪಡೆದು ಬಳಸಬೇಕು (DRONES) ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.