ಪಟ್ಟಣದ ರೋಟರ‌್ಯಾಕ್ಟ್ ಕನ್ನಡ ಮಾಧ್ಯಮ ಶಾಲೆಯ ಮಹೀಂದ್ರ ಸುಪ್ರೋ ಮ್ಯಾಕ್ಸಿ ಕ್ಯಾಬ್ ವಾಹನ ಪಲ್ಟಿಯಾಗಿದೆ. ತಾಲೂಕಿನ ಭೈರನಹಟ್ಟಿ ಗ್ರಾಮದ ಅಭಿಲಾಷಗೌಡ ಪಾಟೀಲ, ಪ್ರಜ್ವಲ್‌ಗೌಡ ಪಾಟೀಲ, ಮುತ್ತು ದಂಡಿನ, ಶಿಲ್ಪಾ ಮಣ್ಣೂರಮಠ ಎಂಬುವರಿಗೆ ಗಂಭೀರ ಸ್ವರೂಪದ ಗಾಯಗಳಾಗಿದ್ದು, ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೌಮ್ಯ ದಂಡಿನ, ರಂಗನಾಥ ಸಂಗಟಿ ಎಂಬುವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ಪಟ್ಟಣದ ಬಾಬಾಸಾಹೇಬ ಭಾವೆ ಸರ್ಕಾರಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.