Woman ಕೌಟುಂಬಿಕ ಕಲಹದಿಂದ ನೊಂದು ಮಹಿಳೆ ಆತ್ಮಹತ್ಯೆ

Woman
Woman
Published on
ಹುಬ್ಬಳ್ಳಿ: ಕೌಟುಂಬಿಕ ಕಲಹದಿಂದ ಮನನೊಂದು ಮಹಿಳೆಯೊಬ್ಬರು (Woman) ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಟೂರ ರಸ್ತೆಯ ಹಾನಗಲ್ಲ ಚಾಳದಲ್ಲಿ ನಡೆದಿದೆ. ಮೂಲತಃ ಗದಗ ಜಿಲ್ಲೆ ಮುಳಗುಂದ ಗ್ರಾಮದ ನಿವಾಸಿ ಹಸಿನಾಬೇಗಂ ರಾಮಗಿ (35) ಮೃತ ಮಹಿಳೆ. ಹಸೀನಾಬೇಗಂ ಹುಬ್ಬಳ್ಳಿಯ ಖಾಸಗಿ ಬ್ಯಾಂಕ್‌ನಲ್ಲಿ ಕೆಲಸ ಮಾಡುತ್ತಿದ್ದಳು. ಬ್ಯಾಂಕ್‌ನ ವ್ಯವಸ್ಥಾಪಕರ ಜತೆ ಅನೈತಿಕ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ವಿಷಯ ಪತಿಗೆ ತಿಳಿದ ಬಳಿಕ ಜಗಳವಾಗಿದ್ದು, ನಂತರ ಆತನನ್ನು ಬಿಟ್ಟು ವ್ಯವಸ್ಥಾಪಕನ ಜತೆಗೆ ಎರಡು ವರ್ಷದಿಂದ ವಾಸವಾಗಿದ್ದರು. ಮದುವೆಯಾಗುವಂತೆ ಒತ್ತಾಯಿಸಿದಾಗ ವ್ಯವಸ್ಥಾಪಕ ನಿರಾಕರಿಸಿದ್ದಕ್ಕೆ ಮನನೊಂದು ವಿಷ ಕುಡಿದಿದ್ದಾಳೆ. ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಕೆಎಂಸಿಆರ್‌ಐಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net