

ಲೋಕಾಪುರ:ದೇಶದಲ್ಲಿ ಮೋದಿ ನಾಯಕತ್ವದಲ್ಲಿ ದೇಶ ಸುಭದ್ರವಾಗಿರಲು ಸಾಧ್ಯ. ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಗೆಲುವಿಗೆ ಎರಡೂ ಪಕ್ಷದ ಕಾರ್ಯಕರ್ತರು ಶ್ರಮಿಸಬೇಕೆಂದು ಬಿಜೆಪಿ ಹಿರಿಯ ಮುಖಂಡ ಆರ್.ಎಸ್. ತಳೇವಾಡ ಹೇಳಿದರು.
ಪಟ್ಟಣದ ಎಪಿಎಂಸಿ ಆವರಣದಲ್ಲಿ ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ನಾಮಪತ್ರ ಸಲ್ಲಿಸುವ ಮುನ್ನ ಕಾರ್ಯಕರ್ತರೊಂದಿಗೆ ಅವರು ಮಾತನಾಡಿದರು.
ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಗಳಲ್ಲೇ ಮುಳುಗಿದೆ. ಅಧಿಕಾರಕ್ಕೆ ಬಂದ ನಂತರ ಯಾವುದೇ ಅಭಿವೃದ್ಧಿ ಕೆಲಸಗಳಾಗಿಲ್ಲ. ಈ ಗ್ಯಾರಂಟಿ ಯೋಜನೆಗಳಿಗೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅನುದಾನ ಬಳಸುವ ಮೂಲಕ ಆ ಸಮುದಾಯಕ್ಕೆ ಅನ್ಯಾಯ ಮಾಡಿದೆ. ಬಿಜೆಪಿ ಅಭ್ಯರ್ಥಿ ಪಿ.ಸಿ. ಗದ್ದಿಗೌಡರ ಅತ್ಯಧಿಕ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದರು.
ಬಿಜೆಪಿ ಮುಖಂಡ ಲೋಕಣ್ಣ ಕತ್ತಿ ಮಾತನಾಡಿ, ನಿಜ ಭಾರತದ ಕನಸು ನನಸಾಗಲು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಮತ್ತೊಮ್ಮೆ ನರೇಂದ್ರ ಮೋದಿ ಪ್ರಧಾನಿಯಾಗಬೇಕು. ಆ ನಿಟ್ಟಿನಲ್ಲಿ ಬಿಜೆಪಿ ಕಾರ್ಯಕರ್ತರು ಪಿ.ಸಿ. ಗದ್ದಿಗೌಡರ ಅವರನ್ನು ಮತ್ತೊಮ್ಮೆ ಹೆಚ್ಚಿನ ಮತಗಳಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ, ವಿಶ್ವಕರ್ವ ಯೋಜನೆ ಸಂಚಾಲಕ ಕುಮಾರ ಹುಲಕುಂದ ಮಾತನಾಡಿ, ದೇಶದಲ್ಲಿ ಬಿಜೆಪಿ 370 ಕ್ಕಿಂತ ಹೆಚ್ಚು ಸ್ಥಾನ ಗೆಲ್ಲುವ ಮೂಲಕ ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿ ಆಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿದಾನಂದ ಪಂಚಕಟ್ಟಿಮಠ, ಯಮನಪ್ಪ ಹೊರಟ್ಟಿ, ಬಿ.ಎಲ್. ಬಬಲಾದಿ, ವಿರೇಶ ಪಂಚಕಟ್ಟಿಮಠ, ಶಿವನಗೌಡ ಪಾಟೀಲ, ಹಣಮಂತ ಅಮ್ಮಲಝರಿ, ಕಾಶಲಿಂಗ ಮಾಳಿ, ವಿನೋದ ಗಂಗಣ್ಣವರ, ಗುರುರಾಜ ಪಂಚಕಟ್ಟಿಮಠ, ಪ್ರವೀಣ ಗಾಣಗೇರ, ಜಾಕೀರ್ ಅತ್ತಾರ, ಪ್ರಕಾಶ ಕರಡಿಗುಡ್ಡ, ಈರಪ್ಪ ಸೊನ್ನದ, ಲೋಕಾಪುರ, ಭಂಟನೂರ, ದಾದನಟ್ಟಿ, ವರ್ಚಗಲ್, ನಾಗಣಾಪುರ, ವೆಂಕಟಾಪುರ, ಜಾಲಿಕಟ್ಟಿ, ಚೌಡಾಪುರ, ಚಿಕ್ಕೂರ, ಚಿತ್ರಭಾನುಕೋಟಿ, ಹೆಬ್ಬಾಳ, ಮುದ್ದಾಪುರ, ಹೊಸಕೋಟಿಯ ಬಿಜೆಪಿ ಮುಖಂಡರು, ಕಾರ್ಯಕರ್ತರು ಇದ್ದರು.