ಅನಂತಪುರಿಯಲ್ಲಿ ಗಡಿನಾಡ ಸಾಂಸ್ಕೃತಿಕ ಉತ್ಸವ

Published on

ಕಾಸರಗೋಡು: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಕರ್ನಾಟಕ ಸರ್ಕಾರ, ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ ಕಾಸರಗೋಡು, ಕರ್ನಾಟಕ ಜಾನಪದ ಪರಿಷತ್ ಕೇರಳ ಗಡಿನಾಡ ಘಟಕ, ಕಾಸರಗೋಡು ಭಾರತ್ ಭವನ ತಿರುವನಂತಪುರ ಸಂಯುಕ್ತ ಆಶ್ರಯದಲ್ಲಿ, ‘ಅನಂತಪುರಿ ಗಡಿನಾಡ ಕನ್ನಡ ಸಂಸ್ಕೃತಿ ಉತ್ಸವ 2024’ ಕಾರ್ಯಕ್ರಮ ನ.27ರಂದು ಬೆಳಗ್ಗೆ 9ರಿಂದ ತಿರುವನಂತಪುರ ತೈಕ್ಕಾಡ್ ಭಾರತ್ ಭವನದಲ್ಲಿ ನಡೆಯಲಿದೆ.

ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಗಡಿನಾಡ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುವುದು. ವಿವಿಧ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net