ಜ್ಞಾನ ಪಡೆದು ಉತ್ತಮ ಪ್ರಜೆಗಳಾಗಿ

Gain knowledge and become good citizens
Gain knowledge and become good citizens
Published on

ಬಾದಾಮಿ: ಇದೊಂದು ಉತ್ತಮ ಶಾಲೆಯಾಗಿದ್ದು, ಇಲ್ಲಿ ಪಡೆದ ಜ್ಞಾನವನ್ನು ನಿಜ ಜೀವನದಲ್ಲಿ ಅಳವಡಿಸಿಕೊಂಡು ಉತ್ತಮ ಪ್ರಜೆಗಳಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಅಂದಾನಪ್ಪ ವಡಗೇರಿ ವಿದ್ಯಾರ್ಥಿನಿಯರಿಗೆ ಸಲಹೆ ನೀಡಿದರು.

ತಾಲೂಕಿನ ಯಂಕಂಚಿ ಮಣಿನಾಗರ ಗ್ರಾಮದ ಕಸ್ತೂರಬಾಗಾಂಧಿ ಬಾಲಕಿಯರ ವಸತಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಕಸ್ತೂರಬಾ ಸಾಂಸ್ಕೃತಿಕ ಸಂಭ್ರಮ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಈ ಶಾಲೆ ತಾಲೂಕಿನಲ್ಲಿಯೇ ವಿಶಿಷ್ಟವಾದ ಶಾಲೆಯಾಗಿದ್ದು, ಇಲ್ಲಿ ಕಲಿತಿರುವ ಹಲವಾರು ವಿದ್ಯಾರ್ಥಿಗಳು ಇಂದು ಶ್ರೇಷ್ಠ ಸಾಧಕರಾಗಿದ್ದಾರೆ. ಇಲ್ಲಿ ಕಲಿಯುತ್ತಿರುವ ಪ್ರತಿ ಮಗುವೂ ಉತ್ತಮ ಶಿಕ್ಷಣ ಪಡೆದು ಸಮಾಜ ಮುಖಿಯಾಗಿ ಕಾರ್ಯ ಮಾಡಬೇಕೆಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಎಂ.ಬಿ. ದೊಡ್ಡಪ್ಪನವರ ಮಾತನಾಡಿ, ಶಿಕ್ಷಕರ ಪ್ರೀತಿ ವಿಶ್ವಾಸದಿಂದ ಎಂತಹ ಮಕ್ಕಳೂ ಸಾಧಕರಾಗಲು ಸಾಧ್ಯ. ಅದಕ್ಕೆ ವಿದ್ಯಾರ್ಥಿಗಳ ಸತತ ಪರಿಶ್ರಮಬೇಕು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರತೀಕ್ಷಣವೂ ಸ್ಫರ್ಧೆ ಇರುತ್ತದೆ. ಅದಕ್ಕೆ ತಕ್ಕಂತೆ ವಿದ್ಯಾರ್ಥಿಗಳು ಸತತವಾಗಿ ಅಧ್ಯಯನಶೀಲರಾಗಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕೇಶವ ವಾಮನ ಪೆಟ್ಲೂರ ವಿದ್ಯಾರ್ಥಿಗಳಿಗೆ ಶುಭಕೋರಿದರು. ಶಿಕ್ಷಣ ಸಂಯೋಜಕ ಎಸ್.ಪಿ.ಗೌಡರ, ಬಿ.ಕೆ.ಚಿಮಲ್, ಎಂ.ಸಿ.ನಾಲತವಾಡ, ವೈ.ಬಿ.ಚಲವಾದಿ, ಸಮೂಹ ಸಂಪನ್ಮೂಲ ವ್ಯಕ್ತಿ ಆರ್.ವಿ. ಗೌಡಪ್ಪಗೌಡ್ರ ಇದ್ದರು.

ಶಾಲೆಯ ಮುಖ್ಯಶಿಕ್ಷಕಿ ಬಸಮ್ಮ ನರಸಾಪುರ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಸಹಶಿಕ್ಷಕಿ ಅನಿತಾ ಜಲಗೇರಿ ಕಾರ್ಯಕ್ರಮವನ್ನು ನಿರೂಪಿಸಿದರು. ಸಹಶಿಕ್ಷಕಿ ಅಂಕಲಿ ಅವರು ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net