ಕ್ರೀಡೆಯಿಂದ ಸದ್ಭಾವ ಪ್ರಾಪ್ತಿ

sports
Published on

ಕಲಘಟಗಿ: ವೈಯಕ್ತಿಕ ಓರೆಕೋರೆಗಳನ್ನು ತಿದ್ದಿಕೊಂಡು ಹೊಂದಾಣಿಕೆಯ ಮನೋಭಾವ ಬೆಳೆಸಿಕೊಳ್ಳಲು ಕ್ರೀಡೆ ನೆರವಾಗುತ್ತದೆ ಎಂದು ಕ್ಷೇತ್ರ ಸಮನ್ವಯಾಧಿಕಾರಿ ಕುಮಾರ ಕೆ.ಎಫ್. ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹಾಗೂ ಕಲಘಟಗಿ ಪಟ್ಟಣದ ಉರ್ದು ಸರ್ಕಾರಿ ಪ್ರೌಢಶಾಲೆಯ ಸಂಯುಕ್ತಾಶ್ರಯದಲ್ಲಿ ಪಟ್ಟಣದ ಜನತಾ ಇಂಗ್ಲಿಷ್ ಸ್ಕೂಲ್‌ನಲ್ಲಿ ಗುರುವಾರ ಆಯೋಜಿಸಿದ್ದ ಕಲಘಟಗಿ ದಕ್ಷಿಣ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ ಉದ್ಘಾಟಿಸಿ ಅವರು ಮಾತನಾಡಿದರು.

‘ಆರೋಗ್ಯ ದೇಹವು ಸದೃಢ ದೇಹ ಮತ್ತು ಮನಸು ಎರಡಕ್ಕೂ ಸಂಬಂಧಿಸಿದೆ. ಆರೋಗ್ಯಯುತ ಜೀವನ ಪಡೆಯಬೇಕಾದರೆ ದೇಹಕ್ಕೆ ಕಸರತ್ತು ಹಾಗು ಮನಸಿಗೆ ನೆಮ್ಮದಿ ಅತ್ಯಗತ್ಯ. ಶಾಲೆಗೆ ಸೇರಿದ ಪ್ರತಿಯೊಂದು ಮಗುವು ಬೌದ್ಧಿಕವಾಗಿ, ಸಾಮಾಜಿಕವಾಗಿ ಬೆಳೆಯುವುದು ಎಷ್ಟು ಮುಖ್ಯವೋ ದೈಹಿಕವಾಗಿ ಸದೃಢವಾಗಿ ಬೆಳೆಯುವುದು ಅಷ್ಟೇ ಮುಖ್ಯ’ ಎಂದರು.

ಶಿಕ್ಷಣ ಸಂಯೋಜಕ ಪುಟ್ಟಪ್ಪ ಭಜಂತ್ರಿ ಮಾತನಾಡಿ, ಕ್ರೀಡಾ ಕ್ಷೇತ್ರವು ಇಚ್ಛಾಶಕ್ತಿ, ಏಕಾಗ್ರತೆ ಮತ್ತು ಸ್ಪರ್ಧಾ ಮನೋಭಾವ ಬೆಳೆಸುತ್ತದೆ. ನಿರಂತರವಾದ ಕಠಿಣ ಪ್ರಯತ್ನದಿಂದ ಮಾತ್ರ ಸಾಧನೆ ಮಾಡಲು ಸಾಧ್ಯ. ಕ್ರೀಡೆಯಲ್ಲಿ ಪರಿಣಿತರಾದವರಿಗೆ ಶ್ಯೆಕ್ಷಣಿಕ ಕ್ಷೇತ್ರದಲ್ಲೂ ಹಲವಾರು ಅವಕಾಶಗಳಿವೆ ಎಂದರು.
ಎಸ್‌ಡಿಎಂಸಿ ಉಪಾಧ್ಯಕ್ಷ ಜಾಫರ್ ಹುನಗುಂದ, ಸರ್ಕಾರಿ ಉರ್ದು ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎ.ಎ. ಖಾಜಿ, ದೈಹಿಕ ಶಿಕ್ಷಣ ಶಿಕ್ಷಕ, ಪಿ.ಎಸ್. ಸಾಳುಂಕಿ, ಪ್ರೊಗ್ರೆಸಿವ್ ಎಜುಕೇಶನ್ ಸೊಸೈಟಿ ಆಡಳಿತಾಧಿಕಾರಿ ಬಸನಗೌಡ ಪಾಟೀಲ, ಜನತಾ ಇಂಗ್ಲಿಷ್ ಸ್ಕೂಲ್ ಮುಖ್ಯೋಪಾಧ್ಯಾಯ ಶ್ರೀಧರ ಪಾಟೀಲ ಕುಲಕರ್ಣಿ, ಗರ್ಲ್ಸ್ ಇಂಗ್ಲಿಷ್ ಸ್ಕೂಲ್ ಮುಖ್ಯೋಪಾಧ್ಯಾಯ ಕೆ.ಐ. ಕೊಂಗಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net