ಸಜ್ಜನ ರಾಜಕಾರಣಿ, ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಂಗಪ್ಪ ನಾಯಕ ನಿಧನ

Raja Rangappa Nayak Raichur
Published on

ರಾಯಚೂರು: ರಾಯಚೂರು ಲೋಕಸಭಾ ಕ್ಷೇತ್ರದ ಮಾಜಿ ಸಂಸದ ರಾಜಾ ರಂಗಪ್ಪ ನಾಯಕ (61) ಭಾನುವಾರ ತಡರಾತ್ರಿ ನಿಧನರಾಗಿದ್ದು, ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಮುಷ್ಠಳ್ಳಿ ಗ್ರಾಮದಲ್ಲಿ ಸೋಮವಾರ ಅಂತ್ಯಕ್ರಿಯೆ ನೆರವೇರಿತು.

1998ರಲ್ಲಿ ಜರುಗಿದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಎ.ವೆಂಕಟೇಶ ನಾಯಕರನ್ನು ಮಣಿಸಿ ಸಂಸದರಾಗಿದ್ದ ಜೆಡಿಎಸ್‌ನ ರಾಜಾ ರಂಗಪ್ಪ ನಾಯಕ, 1998ರಲ್ಲಿ ಜರುಗಿದ ಲೋಕಸಭೆ ಚುನಾವಣೆಯಲ್ಲಿ ಅದೇ ಎ.ವೆಂಕಟೇಶ ನಾಯಕ ವಿರುದ್ಧ ಪರಾಭವಗೊಂಡಿದ್ದರು. 2008ರ ವಿಧಾನಸಭೆ ಚುನಾವಣೆಯಲ್ಲಿ ರಾಯಚೂರು ಗ್ರಾಮೀಣ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ರಾಜಾ ರಾಯಪ್ಪ ನಾಯಕರ ವಿರುದ್ಧ ಪರಾಭವಗೊಂಡಿದ್ದರು. ನಂತರ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದರು. 2019ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್‌ಗಾಗಿ ಪ್ರಯತ್ನ ನಡೆಸಿದರೂ ಟಿಕೆಟ್ ದೊರೆಯದ ಕಾರಣ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದರು. ನಂತರ ಬಿಜೆಪಿ ನಾಯಕರ ಮನವೊಲಿಕೆ ನಂತರ ನಾಮಪತ್ರ ವಾಪಸ್ ಪಡೆದಿದ್ದರು. ಸಜ್ಜನ ರಾಜಕಾರಣಿ ಎಂದು ಹೆಸರು ವಾಸಿಯಾಗಿದ್ದ ರಾಜಾ ರಂಗಪ್ಪ ನಾಯಕ, ಗುಲ್ಬರ್ಗ ಜಿಪಂ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದು, ಮೃತರಿಗೆ ಪತ್ನಿ, ಒಬ್ಬ ಪುತ್ರ ಹಾಗೂ ಇಬ್ಬರು ಪುತ್ರರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net