ಜೂಜುಕೋರನ ಬಂಧನ

Satta-Matka-1-1
Published on

ಧಾರವಾಡ: ತಾಲೂಕಿನ ಕೋಟೂರ ಗ್ರಾಮದಲ್ಲಿ ಮಟಕಾ ಜೂಜಾಟ ನಡೆಸುತ್ತಿದ್ದ ಆರೋಪಿಯನ್ನು ಗರಗ ಠಾಣೆಯ ಪೊಲೀಸರು ಗುರುವಾರ ರಾತ್ರಿ ಬಂಧಿಸಿದ್ದಾರೆ. ಗ್ರಾಮದ ಇಮಾಮಸಾಬ ರಾಜೇಸಾಬ ನಾಯಕ ಬಂಧಿತ. ಗ್ರಾಮದ ಸಾರ್ವಜನಿಕ ಸ್ಥಳದಲ್ಲಿ ಮಟಕಾ ವ್ಯವಹಾರ ನಡೆಸುತ್ತಿದ್ದ ಸಂದರ್ಭದಲ್ಲಿ ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಯಿಂದ 1,240 ರೂಪಾಯಿ ನಗದು ಮತ್ತು ಮಟಕಾ ಸಾಮಗ್ರಿಗಳನ್ನು ಜಪ್ತಿ ಮಾಡಲಾಗಿದೆ. ಪಿಎಸ್‌ಐ ಪ್ರಕಾಶ ಡಿ. ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ನ್ಯಾಯಾ೦ಗ ಬಂಧನಕ್ಕೆ ಒಪ್ಪಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net