

ಕೋಲಾರ: ಯುಗಾದಿ ಹಬ್ಬದ ದಿನ ಮಾ.30ರಂದು ಜಿಲ್ಲೆಯಾದ್ಯಂತ ಜೂಜಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ.ನಿಖಿಲ್ ತಿಳಿಸಿದ್ದಾರೆ.
ಹಬ್ಬ ಆಚರಣೆ ಸಂದರ್ಭದಲ್ಲಿ ಕಲ್ಯಾಣ ಪಂಟಪ, ವಸತಿ ಗೃಹಗಳು, ತೋಟ ಮನೆ, ಮನೆ, ರಸ್ತೆ ಬದಿಗಳಲ್ಲಿ ಟೆಂಟ್ ನಿರ್ಮಿಸಿಕೊಂಡು ಜೂಜಾಡುವುದನ್ನು ನಿಷೇಧಿಸಲಾಗಿದೆ. ಒಂದು ವೇಳೆ ಜೂಜಾಡುವುದು ಕಂಡು ಬಂದಲ್ಲಿ ಅವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಜೂಜಾಡಲು ಪ್ರೋತ್ಸಾಹಿಸಿದ ಸ್ಥಳದ ಮಾಲೀಕರು, ಮಧ್ಯವರ್ತಿಗಳ ಮೇಲೂ ಕಾನೂನು ಕ್ರಮ ಜರುಗಿಸಲಾಗುವುದು. ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗುತ್ತದೆ. ಆದ್ದರಿಂದ ಸಾರ್ವಜನಿಕರು ಜೂಜಾಟದಲ್ಲಿ ತೊಡಗುವುದಾಗಲಿ, ಅದಕ್ಕೆ ಅವಕಾಶ ಮಾಡಿಕೊಡುವುದಾಗಲಿ, ಪ್ರೋತ್ಸಾಹ ಮಾಡುವುದಾಗಿ ಮಾಡಬಾರದು ಎಂದು ತಿಳಿಸಿದ್ದಾರೆ.